ಕೂಡಿಗೆ, ಆ. 10: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನತ್ತೂರು ಗ್ರಾಮದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆ ಅವರ ಮನೆಯನ್ನು ಸೀಲ್‍ಡೌನ್ ಮಾಡಲಾಗಿದೆ.

ಈ ಸಂದರ್ಭ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಯಿಷಾ, ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್, ನೋಡಲ್ ಅಧಿಕಾರಿ ವರದರಾಜ್ ಸೇರಿದಂತೆ ಆರೋಗ್ಯ ಇಲಾಖೆಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಕಂದಾಯ ಇಲಾಖೆಯ ಸಿಬ್ಬಂದಿ ವರ್ಗದವರು ಇದ್ದರು.