ಕೂಡಿಗೆ, ಆ. 10: ಕಳೆದ ವಾರ ಸುರಿದ ಭಾರೀ ಮಳೆ ಗಾಳಿಗೆ ಮತ್ತು ಕಾವೇರಿ ನದಿಯ ನೀರು ಹರಿದ ಪರಿಣಾಮ ಹಾನಿ ಸಂಭವಿಸಿದ ಕುಶಾಲನಗರ ಹೋಬಳಿಯ 5 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೂಡಿಗೆ, ಹೆಬ್ಬಾಲೆ, ತೊರೆನೂರು, ಶಿರಂಗಾಲ, ಅಳುವಾರ, ಕಣಿವೆ, ಚಿಕ್ಕಅಳುವಾರ, ಸಿದ್ದಲಿಂಗಪುರ ಗ್ರಾಮಗಳಿಗೆ ಶಾಸಕರ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್, ತಾಲೂಕು ಬಿಜೆಪಿ ಅಧ್ಯಕ್ಷ ಮನು ಕುಮಾರ ರೈ, ಬಿಜೆಪಿ ಮಂಡಲ ಕಾರ್ಯದರ್ಶಿ ಎಂ.ಡಿ. ಕೃಷ್ಣಪ್ಪ, ತಾಲೂಕು ತಹಶೀಲ್ದಾರ್ ಗೊಂವಿದರಾಜ್, ನೀರಾವರಿ ಇಲಾಖೆಯ ಮಹೇಂದ್ರ ಕುಮಾರ್, ತಾಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ್, ಜಿಲ್ಲಾ ಪಂಚಾಯಿತಿ ಸದಸ್ಯ ಶ್ರೀ ನಿವಾಸ, ತಾಲೂಕು ಪಂಚಾಯಿತಿ ಸದಸ್ಯ ಜಯಣ್ಣ ಸೇರಿದಂತೆ ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ, ಪರಿಹಾರ ಕೊಡುವ ಭರವಸೆ ನೀಡಿದರು.

ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆಯವರು ಒಂದೊಂದು ದಿನ ನಿಗದಿ ಮಾಡಿ ಎಲ್ಲಾ ಗ್ರಾಮಗಳಿಗೆ ಹೋಗಿ ಸ್ಥಳ ವೀಕ್ಷಣೆ ಮಾಡಿ ಸಮಗ್ರವಾದ ಮಾಹಿತಿಯನ್ನು ಪಡೆದು ಪರಿಹಾರ ನೀಡಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.