ಸೋಮವಾರಪೇಟೆ, ಆ. 9: ಸೋಮವಾರಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಕೋವಿಡ್-19 ವೈರಾಣು ಶೀಘ್ರಗತಿಯಲ್ಲಿ ಹರಡುತ್ತಿರುವದರಿಂದ ಮುಂಜಾಗ್ರತಾ ಕ್ರಮವಾಗಿ ತಾ. 10ರ (ಸೋಮವಾರದ) ವಾರದ ಸಂತೆಯನ್ನು ಮುಂದಿನ ಆದೇಶದವರೆಗೆ ರದ್ದುಪಡಿಸಲಾಗಿದೆ. ಸಾರ್ವಜನಿಕರು ಮತ್ತು ವರ್ತಕರು ಸಹಕರಿಸುವಂತೆ ಸೋಮವಾರಪೇಟೆ ಪ.ಪಂ. ಮುಖ್ಯಾಧಿಕಾರಿ ಪಿ.ಕೆ. ನಾಚಪ್ಪ ಮನವಿ ಮಾಡಿದ್ದಾರೆ. ಈಗಾಗಲೇ ಸಂತೆಗೆ ತೆರಳುವ ಮಾರ್ಗ ಗಳನ್ನು ಬ್ಯಾರಿಕೇಡ್ ಹಾಕಿ ಮುಚ್ಚಲಾಗಿದ್ದು, ಇದನ್ನೂ ಮೀರಿ ಸಂತೆ ಹಾಕಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸುವದಾಗಿ ನಾಚಪ್ಪ ಎಚ್ಚರಿಸಿದ್ದಾರೆ.