ಮಡಿಕೇರಿ, ಆ. 10: ಕೇಂದ್ರದ ಬಿಜೆಪಿ ಸರ್ಕಾರವು ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಸಮಾನ ಮನಸ್ಕರ ವೇದಿಕೆ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

‘ನಾವು ಭಾರತೀಯರು’ ಎಂಬ ಘೋಷ ವಾಕ್ಯದೊಂದಿಗೆ ‘ಭಾರತ ಉಳಿಸಿ ಪ್ರತಿಭಟನೆ ಅಭಿಯಾನ’ದಡಿ ನಡೆದ ಪ್ರತಿಭಟನೆಯಲ್ಲಿ ಕಾರ್ಪೊರೇಟ್ ಕಂಪೆನಿಗಳನ್ನು ಭಾರತದಿಂದ ತೊಲಗಿಸಬೇಕು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸರಣಿ ಸುಗ್ರೀವಾಜ್ಞೆ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು. ಪೆಟ್ರೋಲ್, ಡೀಸಲ್, ಅಡುಗೆ ಅನಿಲದ ಬೆಲೆಗಳನ್ನು ಇಳಿಸಬೇಕು, ಕೃಷಿ ತಜ್ಞ ಸ್ವಾಮಿನಾಥನ್ ಆಯೋಗ ವರದಿ ಜಾರಿ ಮಾಡಬೇಕು.

ಮಹಾಮಳೆಯಿಂದಾಗಿ ಪ್ರಾಣಹಾನಿ, ದನಕರುಗಳು ಹಾನಿಯಾಗಿ ಮನೆ - ಭೂಕುಸಿತ, ಕೃಷಿ ನಷ್ಟಗಳಿಗೆ ಸೂಕ್ತ ಪರಿಹಾರ ನೀಡುವದರ ಜೊತೆಗೆ ಈ ರೀತಿಯ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವೇದಿಕೆಯ ಪ್ರಮುಖರಾದ ಅಮಿನ್ ಮೊಯ್ಸಿನ್, ನಿರ್ವಾಣಪ್ಪ, ಅಬೂಬಕರ್, ಮೊಣ್ಣಪ್ಪ, ಮನ್ಸೂರ್ ಮತ್ತಿತರರು ಪಾಲ್ಗೊಂಡಿದ್ದರು.