ಸಿದ್ದಾಪುರ, ಆ. 10: ಪ್ರವಾಹ ಪೀಡಿತ ಪ್ರದೇಶಗಳಿಗೆ ಕಾಂಗ್ರೆಸ್ ಪಕ್ಷದ ಎ ಐ ಟಿ ಸಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿದ್ದಾಪುರದ ಕರಡಿಗೋಡು ಬೆಟ್ಟದಕಾಡು ಭಾಗದ ಜಲಾವೃತಗೊಂಡ ಮನೆಗಳಿಗೆ ದೋಣಿ ಮೂಲಕ ತೆರಳಿ ವೀಕ್ಷಿಸಿದ ನಂತರ ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿ ನಂತರ ಮಾತನಾಡಿದ ಮುತ್ತಪ್ಪ ಕಳೆದ ಎರಡು ವರ್ಷಗಳಿಂದ ಪ್ರವಾಹಕ್ಕೆ ಸಿಲುಕಿ ನದಿತೀರದ ನೂರಾರು ಮನೆಗಳು ಹಾನಿ ಗೊಳಗಾಗಿದೆ ಅಲ್ಲದೆ ನದಿ ತೀರದ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿ ಕೊಂಡಿದ್ದಾರೆ. ಈ ಹಿನ್ನೆಲೆ ಅವರು ಗಳಿಗೆ ಸುರಕ್ಷಿತ ಸ್ಥಳದಲ್ಲಿ ಸರ್ಕಾರದ ವತಿಯಿಂದ ಕೂಡಲೇ ಪುನರ್ವಸತಿ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿದರು. ಕಳೆದ ವರ್ಷ ಹಾನಿಗೊಳಗಾದ ಕುಟುಂಬಗಳಿಗೂ ಪರಿಹಾರವನ್ನು ಸಮರ್ಪಕವಾಗಿ ನೀಡಬೇಕೆಂದು ಒತ್ತಾಯಿಸಿದರು. ಈ ಸಂದರ್ಭ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳಾದ ಸಾಬು ವರ್ಗೀಸ್ ಸೈಯ್ಯದ್ ಭಾವ ಇನ್ನಿತರರು ಹಾಜರಿದ್ದರು.