ಮಡಿಕೇರಿ, ಆ. 10: ಜಿಲ್ಲೆಯಲ್ಲಿ ಸಾರ್ವಜನಿಕ ಜೀವ ಮತ್ತು ಆಸ್ತಿಗಳ ರಕ್ಷಣೆಯ ಹಿತದೃಷ್ಟಿಯಿಂದ ವಾಹನದ ತೂಕ 16,200 ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ/ಮಲ್ಟಿ ಆಕ್ಸಿಲ್ ಟ್ರಕ್‍ಗಳ ಸಂಚಾರ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ಮತ್ತು ಮರಳು ಸಾಗಾಣಿಕೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾ. 10ರವರೆಗೆ ನಿಷೇಧಿಸಲಾಗಿತ್ತು.

ಪ್ರಸ್ತುತ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ನೆಲದಲ್ಲಿ ತೇವಾಂಶ ಹೆಚ್ಚಾಗಿ ಅಲ್ಲಲ್ಲಿ ಭೂಕುಸಿತವಾಗುತ್ತಿರುವುದಾಗಿದೆ. ಈ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಸಂಚಾರ ನಿಬರ್ಂಧ ಆದೇಶವನ್ನು ತಾ. 31 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.