ಮಡಿಕೇರಿ, ಆ. 11: ಸರಕಾರದ ಆದೇಶದಲ್ಲಿ 2020ನೇ ಸಾಲಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುವ ಬಗ್ಗೆ ನಿರ್ದೇಶನಗಳನ್ನು ನೀಡಿಲಾಗಿದೆ. ಪ್ರತಿವರ್ಷ ಆಗಸ್ಟ್ 15 ರಂದು ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ರಾಷ್ಟ್ರೀಯ ಹಬ್ಬವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಕೊರೊನಾ ಹಿನ್ನೆಲೆ ಈ ಬಾರಿ ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರುಗಳು ಮಾತ್ರ ಶಾಲೆಗಳಿಗೆ ಹಾಜರಾಗಿ ಸರಕಾರದ ಆದೇಶದಲ್ಲಿ ಸೂಚಿಸಿರುವ ನಿರ್ದೇಶನಗಳನ್ನು ಪಾಲಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಕಡ್ಡಾಯವಾಗಿ ಆಚರಿಸಲು ಸೂಚಿಸಿದೆ.