ಮಡಿಕೇರಿ, ಆ. 11: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ ವತಿಯಿಂದ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆ ಇವರ ಸಹಯೋಗದಲ್ಲಿ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಪಂಚಕರ್ಮ ವಿಭಾಗದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ತಾ. 15 ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಸರ್ಕಾರಿ ಆಯುಷ್ ಆಸ್ಪತ್ರೆಯಲ್ಲಿ ನಡೆಯಲಿದೆ.