ಮಡಿಕೇರಿ, ಆ. 12: ಬೆಂಗಳೂರು ನಗರದಲ್ಲಿ ನಿನ್ನೆ ರಾತ್ರಿ ನಡೆದ ದಾಂಧಲೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮತ್ತು ಅವರ ನೆರೆಯ ಹಿಂದೂಗಳ ಮೇಲೆ, ಪೆÇಲೀಸ್ ಇಲಾಖೆ ಅಧಿಕಾರಿಗಳ ಮೇಲೆ ಎಸ್‍ಡಿಪಿಐ ಹಾಗೂ ಪಿಎಫ್‍ಐ ಸಂಘಟನೆಗಳ ದಾಳಿಯನ್ನು ಖಂಡಿಸಿ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ವಿಶ್ವ ಹಿಂದೂ ಪರಿಷದ್, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಕೊಡಗು ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಸಂಘದ ವಿವಿಧ ಕ್ಷೇತ್ರಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಗಲಭೆಕೋರರ ಗಡೀಪಾರಿಗೆ ಆಗ್ರಹಿಸಿದರು.

ವಿಶ್ವ ಹಿಂದೂ ಪರಿಷದ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ. ನರಸಿಂಹ ಮಾತನಾಡಿ; ನಮ್ಮನ್ನು ಕಾಯುವ ಪೆÇಲೀಸರಿಗೇ ರಕ್ಷಣೆ ಇಲ್ಲದಂತಾಗಿದೆ. ದೇಶದಲ್ಲಿ ಇದ್ದುಕೊಂಡು ಸಮಾಜ ಒಡೆಯುವವರು ದೇಶ ಬಿಟ್ಟು ಹೋಗುವಂತೆ ಆಗ್ರಹಿಸಿದರು. ಭಜರಂಗದಳದ ಜಿಲ್ಲಾ ಸಂಯೋಜಕ ಚೇತನ್, ಜಿಲ್ಲಾ ವಿದ್ಯಾರ್ಥಿ ಪ್ರಮುಖ ವಿನಯ್ ಕುಮಾರ್, ನಗರ ಸಂಯೋಜಕ ಮನು ರೈ, ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಹೇಶ್, ಬಾ. ಜ. ಪಾ ನಗರ ಅಧ್ಯಕ್ಷ ಮನು ಮಂಜುನಾಥ್, ಭಜರಂಗದಳದ ನಗರ ಸಹ ಸಂಯೋಜಕ ದುರ್ಗೇಶ್, ಡಿ. ಹೆಚ್. ಮೇದಪ್ಪ, ಸತ್ಯ ಕರ್ಕೇರ, ಪಿ.ಎಂ. ರವಿ, ಉಮೇಶ್ ಸುಬ್ರಮಣಿ ಮತ್ತಿತರರು ಹಾಜರಿದ್ದರು.