ಮಡಿಕೇರಿ, ಆ.12: ಪ್ರಸಕ್ತ (2020-21) ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ ಡಿಪ್ಲೋಮಾ ಮತ್ತು ವೃತ್ತಿಪರ ಪದವಿ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲಾ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಕರ್ನಾಟಕ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ(ಅಧಿಕಾರಿಗಳನ್ನು ಹೊರತು ಪಡಿಸಿ) ಶಿಷ್ಯವೇತನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯ ಮಾದರಿ ಜಂಟಿ ನಿರ್ದೇಶಕರ ಕಾರ್ಯಾಲಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಡಿಕೇರಿ ಅವರಿಂದ ಪಡೆದು 2020ರ ನವೆಂಬರ್, 30 ಒಳಗೆ ಸಲ್ಲಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.