ಮಡಿಕೇರಿ, ಆ.12: ಜಿಲ್ಲೆಯ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಿಗೆ 2020-21ನೇ ಸಾಲಿನ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ವಸತಿ ಶಿಕ್ಷಣಗಳ ಸಂಸ್ಥೆಗಳ ಸಂಘದಡಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಿಗೆ 6 ನೇ ತರಗತಿಗೆ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿತ್ತು, ಆದರೆ ಕೋವಿಡ್-19 ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿನ ವಸತಿ ಶಿಕ್ಷಣ ಸಂಸ್ಥೆಗಳ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಅಭ್ಯರ್ಥಿಗಳ, ಪೋಷಕರ ಹಿತದೃಷ್ಠಿಯಿಂದ ಅರ್ಜಿ ಸಲ್ಲಿಸಲು ಪುನಃ ಆರಂಭಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್, 25 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಹಾಗೂ “ಮಾಹಿತಿ ಪುಸ್ತಕ-2020” ವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‍ಸೈಟ್ hಣಣಠಿ://ಞeಚಿ.ಞಚಿಡಿ.ಟಿiಛಿ.iಟಿ ನಲ್ಲಿ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವೆಬ್‍ಸೈಟ್ hಣಣಠಿ://ಞಡಿeis.ಞಚಿಡಿ.ಟಿiಛಿ.iಟಿ ನಲ್ಲಿ ನೋಡಬಹುದು.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಆಯಾಯ ಜಿಲ್ಲಾ ವ್ಯಾಪ್ತಿಗೆ ಬರುವ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಆಗಸ್ಟ್, 25 ರವರೆಗೆ ಅರ್ಜಿ ಸಲ್ಲಿಸಬಹುದು. ಕ್ವಾರಂಟೈನ್ ಸೆಂಟರ್, ಕೋವಿಡ್ ಕೇರ್ ಸೆಂಟರ್‍ಗಾಗಿ ಬಳಸಲಾಗುತ್ತಿರುವ ವಸತಿ ಶಾಲೆಗಳ ಅರ್ಜಿಗಳನ್ನು ಹತ್ತಿರದ ವಸತಿ ಶಾಲೆಗಳಲ್ಲಿ ಹಾಗೂ ಸಂಬಂಧಪಟ್ಟ ಪ್ರಾಂಶುಪಾಲರನ್ನು ಸಂಪರ್ಕಿಸಿ. ಸಾಮಾಜಿಕ ಅಂತರ ಕಾಪಾಡಿಕೊಂಡು, ಮುಖ ಕವಚವನ್ನು ಧರಿಸಿಕೊಂಡು ಬರಲು ಸೂಚಿಸಿದೆ. ಎಲ್ಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಸದಾವಕಾಶವನ್ನು ಉಪಯೋಗಿಸಿಕೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ ಅವರು ತಿಳಿಸಿದ್ದಾರೆ.