ನಾಪೋಕ್ಲು, ಆ. 12: ಚಂಬೆಬೆಳ್ಳೂರು, ದೇವಣಗೇರಿ, ಮೈತಾಡಿ ವ್ಯಾಪ್ತಿಗೆ ಒಳಪಡುವ ಗ್ರಾಮದಲ್ಲಿ ಕೊರೊನಾ ಸೋಂಕಿನ ವಿರುದ್ಧ ಗ್ರಾಮದ ಜನರಲ್ಲಿ ಜಾಗೃತಿ ಮೂಡಿಸಿ ಉತ್ತಮ ಕೆಲಸ ಮಾಡಿದ ಆಶಾ ಹಾಗೂ ಆರೋಗ್ಯ ಕಾರ್ಯಕರ್ತರನ್ನು ದೇವಣಗೇರಿ ವ್ಯವಸಾಯ ಸೇವಾ ಸಹಕಾರ ಸಂಘದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭ ಸಂಘದ ಅಧ್ಯಕ್ಷ ಮೂಕೊಂಡ ಶಶಿ ಸುಬ್ರಮಣಿ, ಉಪಾಧ್ಯಕ್ಷ ಮುಂಡಚಾಡಿರ ನಂದಾ ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು. ಕೋವಿಡ್ 19 ವಿಚಾರದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಸಾವಿರ ದೇಣಿಗೆಯನ್ನು ಶಾಸಕ ಕೆ.ಜಿ ಬೋಪಯ್ಯ ಅವರ ಬಳಿ ಹಸ್ತಾಂತರಿಸಲಾಯಿತು.