ಬೆಂಗಳೂರು, ಆ.12: ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಮಂಗಳವಾರ ಮಧ್ಯರಾತ್ರಿ ವೇಳೆ ಭಯಾನಕ ದಾಂಧಲೆ ನಡೆದಿದೆ. ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮನೆಗೆÉ ಬೆಂಕಿ ನೀಡಲ್ಪಟ್ಟು ಸಂಪೂರ್ಣ ಧ್ವಂಸಗೊಂಡಿದೆ. ಶಾಸಕರ ಸೋದರಳಿಯ ನವೀನ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಸಮುದಾಯವೊಂದರÀ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದು ಇದರಿಂದ ಕೋಪಗೊಂಡ ದುಷ್ಕರ್ಮಿಗಳು ಶಾಸಕ ಅಖಂಡ ಶ್ರೀನಿವಾಸ್ ಅವರ ಮನೆಗೆ ನಿನ್ನೆ ರಾತ್ರಿ ಬೆಂಕಿ ಹಚ್ಚಿ ಧ್ವಂಸಗೊಳಿಸಿ ಅಮೂಲ್ಯ ವಸ್ತುಗಳನ್ನೆಲ್ಲ ದೋಚಿದ್ದಾರೆ. ನಗರದ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ವೇಳೆ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. 60 ಪೊಲೀಸರಿಗೆ ಗಾಯಗಳಾಗಿವೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ನಿನ್ನೆ ರಾತ್ರಿ ಸಾವಿರಕ್ಕೂ ಹೆಚ್ಚು ಜನರು ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ಗಲಭೆ ನಡೆಸಿದ್ದಾರೆ. ಕಾಂಗ್ರೆಸ್ ಶಾಸಕ ಅಖಂಡ ಅವರ ಮನೆಯನ್ನು ಸುಟ್ಟು ಹಾಕಿದ್ದಾರೆ. ಪೆÇಲೀಸ್ ಠಾಣೆಯನ್ನು ಗುರಿ ಮಾಡಿ ಧ್ವಂಸ ಮಾಡಿದ್ದಾರೆ. ನೂರಾರು ವಾಹನಗಳನ್ನು ನಾಶಗೊಳಿಸಿದ್ದಾರೆ. ರಾತ್ರಿ 3 ಗಂಟೆಯವರೆಗೆ ದಾಂಧಲೆ ನಡೆದಿದೆ. ಪೆÇಲೀಸ್‍ಕ್ವಾರ್ಟಸ್ ಮೇಲೂ ಕೂಡ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಕಟ್ಟಡದ ಮೇಲೆ ನಿಂತುಕೊಂಡು ಪೆÇಲೀಸರ ಮೇಲೆ ಕಲ್ಲು, ಬಾಟಲಿಗಳನ್ನು ಎಸೆದಿದ್ದಾರೆÉ. ಕೆಎಸ್‍ಆರ್‍ಪಿ ತುಕಡಿ ವಾಹನಕ್ಕೂ ಬೆಂಕಿ ಹಚ್ಚಲಾಗಿದೆ.
(ಮೊದಲ ಪುಟದಿಂದ) ಫೇಸ್‍ಬುಕ್‍ನಲ್ಲಿ ಅವಹೇಳನಕಾರಿ ಪೆÇೀಸ್ಟ್ ಹಾಕಿರುವ ಹಿನ್ನೆಲೆಯಲ್ಲಿ ಮುಖ್ಯ ಆರೋಪಿ ನವೀನ್‍ನನ್ನು ಬಂಧಿಸಲಾಗಿದೆ. ಅಲ್ಲದೆ ಗುಂಪು ಗಲಭೆ ನಡೆಸಿದ ಸುಮಾರು 146 ಮಂದಿಯನ್ನು ಬಂಧಿಸಲಾಗಿದೆ. ಎಸ್‍ಡಿಪಿಐ - ಪಿಎಫ್‍ಐ ಕೈವಾಡ : ಆರ್. ಅಶೋಕ್ ಸಮುದಾಯದ ಗುಂಪು ಕಳೆದ ರಾತ್ರಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರ ಮನೆ ಮೇಲೆ ಏಕಾಏಕಿ ದಾಳಿ ನಡೆಸಿ ತೀವ್ರ ದಾಂಧಲೆ ನಡೆಸಿತು. ಪರಿಸ್ಥಿತಿ ನಿಯಂತ್ರಿಸಲು ಬಂದ ಪೆÇಲೀಸ್ ವಾಹನದ ಮೇಲೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿತ್ತು. ಶಾಸಕರ ಮನೆ ಬೆಂಕಿಯಿಂದ ಧಗ ಧಗ ಉರಿಯಿತು. ಅಲ್ಲದೆ, ಈ ಗುಂಪು ಸಿಕ್ಕ ಸಿಕ್ಕ ಮನೆ-ಅಂಗಡಿಗಳಿಗೆ ನುಗ್ಗಿ ದಾಂಧಲೆ ನಡೆಸಿತು. ಗುಂಪು ಗಲಭೆಯಲ್ಲಿ ಎಸ್‍ಡಿಪಿಐ- ಪಿಎಫ್‍ಐ ಮೊದಲಾದ ಸಂಘಟನೆಗಳ ಕೈವಾಡವಿದ್ದು ಈ ಬಗ್ಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಹತ್ತಿಕ್ಕಲಾಗುವದು ಎಂದು ಕಂದಾಯ ಸಚಿವ ಆರ್. ಅಶೋಕ್ ಘೋಷಿಸಿದರು.
ಗಲಭೆ ಜಿಲ್ಲಾ ಮ್ಯಾಜಿಸ್ಟ್ರೇಟ್ ತನಿಖೆÉಗೆ
ಡಿಜೆ ಹಳ್ಳಿ ಗಲಭೆ ಪ್ರಕರಣವನ್ನು ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ತನಿಖೆಗೆ ವಹಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವ ಸದಾನಂದಗೌಡ, ಆರ್.ಅಶೋಕ್, ಡಿಜಿಪಿ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಭಾಗಿಯಾಗಿದ್ದರು, ಯಾವ ರೀತಿ ತನಿಖೆ ನಡೆಸಬೇಕು ಎಂದು ಮಹತ್ವದ ಚರ್ಚೆ ನಡೆಸಲಾಯಿತು. ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಹಾಗು ಡಿವಿ ಸದಾನಂದಗೌಡ ಜೊತೆ ಸಭೆ ಸಿಎಂ ಸಭೆ ನಡೆಸಿ ಪರಿಸ್ಥಿತಿ ಅವಲೋಕನ ಮಾಡಿದರು, ಎಲ್ಲಾ ಆಯಾಮದಲ್ಲಿ ಚರ್ಚಿಸಲಾಯಿತು, ಇಡಿ ಪ್ರಕರಣ, ಬೆಂಕಿ ಹಾಕಿದ್ದು, ಪುಂಡಾಟ ಮಾಡಿದ್ದು ಎಲ್ಲವನ್ನೂ ಚರ್ಚಿಸಿ, ಅಂತಿಮವಾಗಿ ಜಿಲ್ಲಾ ಮ್ಯಾಜಿಸ್ಟ್ರೇಟ್ ನೇತೃತ್ವದ ತನಿಖೆ ನಡೆಸಲು ನಿರ್ಧಾರ ಕೈಗೊಳ್ಳಲಾಯಿತು (ಮೊದಲ ಪುಟದಿಂದ) ಫೇಸ್‍ಬುಕ್‍ನಲ್ಲಿ ಅವಹೇಳನಕಾರಿ ಪೆÇೀಸ್ಟ್ ಹಾಕಿರುವ ಹಿನ್ನೆಲೆಯಲ್ಲಿ ಮುಖ್ಯ ಆರೋಪಿ ನವೀನ್‍ನನ್ನು ಬಂಧಿಸಲಾಗಿದೆ. ಅಲ್ಲದೆ ಗುಂಪು ಗಲಭೆ ನಡೆಸಿದ ಸುಮಾರು 146 ಮಂದಿಯನ್ನು ಬಂಧಿಸಲಾಗಿದೆ.
ಎಸ್‍ಡಿಪಿಐ - ಪಿಎಫ್‍ಐ ಕೈವಾಡ : ಆರ್. ಅಶೋಕ್
ಸಮುದಾಯದ ಗುಂಪು ಕಳೆದ ರಾತ್ರಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರ ಮನೆ ಮೇಲೆ ಏಕಾಏಕಿ ದಾಳಿ ನಡೆಸಿ ತೀವ್ರ ದಾಂಧಲೆ ನಡೆಸಿತು. ಪರಿಸ್ಥಿತಿ ನಿಯಂತ್ರಿಸಲು ಬಂದ ಪೆÇಲೀಸ್ ವಾಹನದ ಮೇಲೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿತ್ತು. ಶಾಸಕರ ಮನೆ ಬೆಂಕಿಯಿಂದ ಧಗ ಧಗ ಉರಿಯಿತು. ಅಲ್ಲದೆ, ಈ ಗುಂಪು ಸಿಕ್ಕ ಸಿಕ್ಕ ಮನೆ-ಅಂಗಡಿಗಳಿಗೆ ನುಗ್ಗಿ ದಾಂಧಲೆ ನಡೆಸಿತು. ಗುಂಪು ಗಲಭೆಯಲ್ಲಿ ಎಸ್‍ಡಿಪಿಐ- ಪಿಎಫ್‍ಐ ಮೊದಲಾದ ಸಂಘಟನೆಗಳ ಕೈವಾಡವಿದ್ದು ಈ ಬಗ್ಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಹತ್ತಿಕ್ಕಲಾಗುವದು ಎಂದು ಕಂದಾಯ ಸಚಿವ ಆರ್. ಅಶೋಕ್ ಘೋಷಿಸಿದರು.
ಗಲಭೆ ಜಿಲ್ಲಾ ಮ್ಯಾಜಿಸ್ಟ್ರೇಟ್ ತನಿಖೆÉಗೆ
ಡಿಜೆ ಹಳ್ಳಿ ಗಲಭೆ ಪ್ರಕರಣವನ್ನು ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ತನಿಖೆಗೆ ವಹಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವ ಸದಾನಂದಗೌಡ, ಆರ್.ಅಶೋಕ್, ಡಿಜಿಪಿ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಭಾಗಿಯಾಗಿದ್ದರು, ಯಾವ ರೀತಿ ತನಿಖೆ ನಡೆಸಬೇಕು ಎಂದು ಮಹತ್ವದ ಚರ್ಚೆ ನಡೆಸಲಾಯಿತು. ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಹಾಗು ಡಿವಿ ಸದಾನಂದಗೌಡ ಜೊತೆ ಸಭೆ ಸಿಎಂ ಸಭೆ ನಡೆಸಿ ಪರಿಸ್ಥಿತಿ ಅವಲೋಕನ ಮಾಡಿದರು, ಎಲ್ಲಾ ಆಯಾಮದಲ್ಲಿ ಚರ್ಚಿಸಲಾಯಿತು, ಇಡಿ ಪ್ರಕರಣ, ಬೆಂಕಿ ಹಾಕಿದ್ದು, ಪುಂಡಾಟ ಮಾಡಿದ್ದು ಎಲ್ಲವನ್ನೂ ಚರ್ಚಿಸಿ, ಅಂತಿಮವಾಗಿ ಜಿಲ್ಲಾ ಮ್ಯಾಜಿಸ್ಟ್ರೇಟ್ ನೇತೃತ್ವದ ತನಿಖೆ ನಡೆಸಲು ನಿರ್ಧಾರ ಕೈಗೊಳ್ಳಲಾಯಿತು ನಿಲ್ಲಿಸಿದ್ದ ವಾಹನಗಳಿಗೂ ಬೆಂಕಿ ಹಚ್ಚಿ ಪುಂಡರು ದಾಂಧಲೆ ನಡೆಸಿದ್ದುದನ್ನು ನೋಡಿದ ಈ ಸ್ಥಳೀಯ ಯುವಕರು ಶಾಸಕರ ಮನೆಯ ಎದುರು ಭಾಗದಲ್ಲೇ ಇರುವ ಆಂಜನೇಯಸ್ವಾಮಿ ದೇಗುಲದ ಮೇಲೆಯೂ ದಾಳಿಯಾಗಬಹುದು ಎಂಬ ಶಂಕೆ ಮೇರೆಗೆ ಮಾನವ ಸರಪಳಿ ನಿರ್ಮಿಸಿ ರಕ್ಷಿಸಿದ್ದಾರೆ.
ಇನ್ನು, ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಾಸಕ ಅಖಂಡ ಶ್ರೀನಿವಾಸ್‍ಮೂರ್ತಿ, ಏನೇ ಆಗಿದ್ದರೂ ನಾವೆಲ್ಲಾ ಅಣ್ಣ-ತಮ್ಮಂದಿರಂತೆ ಇರೋಣ. ಪೆÇೀಸ್ಟ್‍ಹಾಕಿದ್ದ ಕಿಡಿಗೇಡಿಯನ್ನು ಈಗಾಗಲೇ ಬಂಧಿಸಿದ್ದೇವೆ ಎಂದು ಹೇಳಿದ್ದು, ಗಲಾಟೆ ಮಾಡಬೇಡಿ. ಶಾಂತಿಯಿಂದ ಇರಿ. ತನಿಖೆಯಿಂದ ಎಲ್ಲಾ ಹೊರಬರಲಿದೆ ಎಂದು ಕ್ಷೇತ್ರದ ಮತದಾರರದಲ್ಲಿ ಮನವಿ ಮಾಡಿದ್ದಾರೆ.