ಮಡಿಕೇರಿ, ಆ. 13: ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕೊಡಗರಳ್ಳಿ, ಕಂಬಿಬಾಣೆ, ನಂಜರಾಯಪಟ್ಟಣ, ಕೂಡಿಗೆ, ಕೂಡುಮಂಗಳೂರು, ಹೆಬ್ಬಾಲೆ, ತೊರೆನೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದ ರೈತರ ಜಮೀನು ಮತ್ತು ಮನೆ ಹಾಗೂ ಸಾರ್ವಜನಿಕ ಸಂಪರ್ಕ ರಸ್ತೆಯನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.
ಗೌಡಳ್ಳಿ, ಹಂಡ್ಲಿ, ಕೊಡ್ಲಿಪೇಟೆ, ಬೆಸೂರು, ಬ್ಯಾಡಗೊಟ್ಟ, ಆಲೂರು ಸಿದ್ದಾಪುರ ಪಂಚಾಯಿತಿ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಿಗೂ ಕೂಡ ಭೇಟಿ ನೀಡಿ ಪರಿಶೀಲಿಸಿದರು. ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಇತರರು ಇದ್ದರು.