ಕುಶಾಲನಗರ, ಆ. 12: ಕುಶಾಲನಗರ- ಮೈಸೂರು ರಸ್ತೆಯ ಮೊಬೈಲ್ ಅಂಗಡಿಯಲ್ಲಿ ಕಳ್ಳತನವಾಗಿರುವ ಬಗ್ಗೆ ಮಾಲೀಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪಟ್ಟಣದ ದಿವ್ಯ ಮೊಬೈಲ್ಸ್ ಅಂಗಡಿಯಲ್ಲಿ ಸೋಮವಾರ ಕೆಲಸ ನಿರ್ವಹಿಸುತ್ತಿದ್ದ ವೇಳೆ ಗ್ರಾಹಕನ ಸೋಗಿನಲ್ಲಿ ಬಂದ ಯುವಕನೊಬ್ಬ 30 ಸಾವಿರ ನಗದು ದೋಚಿರುವುದಾಗಿ ತಿಳಿಸಿದ್ದಾರೆ. ಘಟನೆ ಅಂಗಡಿಯ ಸಿಸಿ ಕ್ಯಾಮೆರದಲ್ಲಿ ಸೆರೆಯಾಗಿದೆ. ಈ ಬಗ್ಗೆ ಠಾಣೆಯಲ್ಲಿ ದೂರು ನೀಡಿರುವುದಾಗಿ ಅಂಗಡಿ ಮಾಲೀಕ ತಿಳಿಸಿದ್ದು, ಮೊಕದ್ದಮೆ ಇನ್ನೂ ದಾಖಲಾಗಿಲ್ಲ ಎಂದಿದ್ದಾರೆ.