ಮಡಿಕೇರಿ ಆ. 12: ನಗರದ ಜಿಲ್ಲಾಡಳಿತ ಭವನದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸ್ನೇಹ ಶ್ರೀ ಕೃಷ್ಣನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಟಿ. ದರ್ಶನ್, ಮಣಜೂರು ಮಂಜುನಾಥ್ ಇತರರು ಇದ್ದರು.