ಸೋಮವಾರಪೇಟೆ, ಆ. 13: ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸುವ ಸಲುವಾಗಿ ಪೂರ್ವಭಾವಿ ಸಿದ್ಧತಾ ಸಭೆ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ತಹಶೀಲ್ದಾರ್ ಆರ್. ಗೋವಿಂದರಾಜ್ ವಹಿಸಿದ್ದರು. ಧ್ವಜಾರೋಹಣವನ್ನು ತಾ. 15 ರಂದು ಬೆಳಿಗ್ಗೆ 8.30ಕ್ಕೆ ನೆರವೇರಿಸಲಾಗುವದು. ನಂತರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗು ಪಟ್ಟಣ ಪಂಚಾಯಿತಿ ಸಹಭಾಗಿತ್ವದಲ್ಲಿ ಬೆಳಿಗ್ಗೆ 9 ಗಂಟೆಗೆ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ವಾರಿಯರ್ಸ್‍ಗಳಿಗೆ ಸನ್ಮಾನಿಸುವಂತೆ ತೀರ್ಮಾನಿಸಲಾಯಿತು.

ಸಭೆಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್, ಸದಸ್ಯರಾದ ಎಸ್.ಡಿ. ವಿಜೇತ, ಜೆ.ಸಿ. ಶೇಖರ್, ಶಿಕ್ಷಣ ಇಲಾಖೆಯ ಸದಾಶಿವಪಲ್ಲೇದ್, ಚನ್ನಪ್ಪ, ಪೊಲೀಸ್ ವೃತ್ತ ನಿರೀಕ್ಷಕ ನಂಜುಂಡೇಗೌಡ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ ಮತ್ತಿತರರು ಉಪಸ್ಥಿತರಿದ್ದರು.