ಕೂಡಿಗೆ, ಆ. 14: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊರೆನೂರು ಮುಖ್ಯ ರಸ್ತೆ ಮತ್ತು ಅದರ ಉಪ ರಸ್ತೆಗಳ ಕಾಮಗಾರಿಯು ನೀರಾವರಿ ಇಲಾಖೆಯ ವತಿಯಿಂದ ನಡೆಯುತಿತ್ತು. ಆದರೆ ಗುತ್ತಿಗೆದಾರರು ಶೇ. 60 ಭಾಗದಷ್ಟು ಕಾಮಗಾರಿ ಮಾಡಿ ಸ್ಥಗಿತಗೊಳ್ಳಿಸಿದ್ದಾರೆ. ಈ ಕಾಮಗಾರಿಯನ್ನು ಮುಂದುವರಿಸುವಂತೆ ಗ್ರಾಮಕ್ಕೆ ಭೇಟಿ ನೀಡಿದ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಅವರಿಗೆ ಅಲ್ಲಿನ ಗ್ರಾಮಸ್ಥರು ಆಗ್ರಹಿಸಿದರು.
ಶಾಸಕ ಅಪ್ಪಚ್ಚು ರಂಜನ್ ಕಾಮಗಾರಿಯ ಸ್ಥಳವನ್ನು ಪರಿಶೀಲನೆ ನಡೆಸಿ ಕಾಮಗಾರಿಯನ್ನು ಪೂರ್ಣಗೊಳಿಸಲು ಸ್ಥಳದಲ್ಲಿ ಹಾಜರಿದ್ದ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿಲ್ಲಾ ಪಂಚಾಯಿತಿ ಸದಸ್ಯ ಶ್ರೀನಿವಾಸ್, ತಾಲೂಕು ಪಂಚಾಯಿತಿ ಸದಸ್ಯ ಜಯಣ್ಣ, ತೊರೆನೂರು ಸಹಕಾರ ಸಂಘದ ನಿರ್ದೇಶಕ ಟಿ.ಕೆ. ಪಾಂಡುರಂಗ, ತೊರೆನೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದೇವರಾಜ್ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಹಾಜರಿದ್ದರು.