ಕಣಿವೆ, ಆ. 14: ಹಾರಂಗಿ ಜಲಾಶಯದ ಹಳೆಯ ಸೇತುವೆ ಬಳಿ ಹೊಸದಾದ ಮೇಲ್ಸೇತುವೆ ನಿರ್ಮಿಸಬೇಕೆಂಬ ಗ್ರಾಮಸ್ಥರ ಒತ್ತಾಯದ ಮೇರೆಗೆ ಶಾಸಕ ಅಪ್ಪಚ್ಚು ರಂಜನ್ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿ ಹೊಳಿ ಅವರಿಗೆ ಪತ್ರ ಬರೆದಿದ್ದು, ಜಲಾಶಯದಿಂದ ಮಳೆಗಾಲದಲ್ಲಿ ಸ್ಥಳೀಯರಿಗೆ ಆಗುವ ಅನಾನುಕೂಲದ ಬಗ್ಗೆ ಪತ್ರದಲ್ಲಿ ವಿವರಿಸಿ ಕೂಡಲೇ ಸೇತುವೆ ನಿರ್ಮಾಣಕ್ಕೆ ಅಗತ್ಯ ಹಣಕಾಸಿನ ನೆರವು ಮೀಸಲಿಟ್ಟು ಸೇತುವೆ ನಿರ್ಮಿಸಲು ಒತ್ತಾಯಿಸಿದ್ದಾರೆ ಎಂದು ಶಾಸಕರ ಪರವಾಗಿ ಹಾರಂಗಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಭಾಸ್ಕರ ನಾಯಕ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.