ಮಡಿಕೇರಿ, ಆ. 14: ಶಾಸಕರ ಸಂಬಂಧಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸ.ಅ) ಅವರನ್ನು ನಿಂದಿಸಿ ಪೆÇೀಸ್ಟ್ ಹಾಕಿದ ಕಾರಣದಿಂದ ಉತ್ತರ ಬೆಂಗಳೂರಿನ ಕೆಲವು ಭಾಗಗಳಲ್ಲಿ ಘರ್ಷಣೆ ನಡೆದಿದ್ದು, ಧಾರ್ಮಿಕ ಭಾವನೆ ಕೆರಳಿಸುವವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಎಸ್.ಕೆ.ಎಸ್.ಎಸ್.ಎಫ್. ಜಿಸಿಸಿ ಕೊಡಗು ಘಟಕ ಸರ್ಕಾರವನ್ನು ಒತ್ತಾಯಿಸಿದೆ. ಅದೇ ರೀತಿ ಕಾನೂನು ಪಾಲಕರ ಹಾಗೂ ಸಾರ್ವಜನಿಕರ ಆಸ್ತಿ ಪಾಸ್ತಿ ನಷ್ಟ ಮಾಡುವವರ ಹಾಗೂ ಕಾನೂನು ಕೈಗೆತ್ತಿಕೊಂಡು ಶಾಂತಿ ಕದಡುವವರು ವಿರುದ್ಧವೂ ಗೃಹ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದೆ.