ಮಡಿಕೇರಿ ಆ. 14: ವೀರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಂಡಂಗೇರಿ, ಬೇತ್ರಿಯ ನೆರೆ ಪೀಡಿತ ಪ್ರದೇಶ ಹಾಗೂ ಮನೆಗಳಿಗೆ ಕೊಡಗು ಜಿಲ್ಲಾ ಕಾಂಗ್ರೆಸ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಜನರ ಸಮಸ್ಯೆಗಳನ್ನು ಆಲಿಸಿದ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಸಂತ್ರಸ್ತರಿಗೆ ಸಾಂತ್ವನ ಹೇಳಿ, ಅಧಿಕಾರಿಗಳು ಜನರ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ ಸ್ಪಂದಿಸುವಂತೆ ಒತ್ತಾಯಿಸಿದರು. ನಿಯೋಗದಲ್ಲಿ ಕೊಂಡಂಗೇರಿ ವಲಯಾಧ್ಯಕ್ಷ ಸಾದಲಿ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಂದಾಯಿ, ಸಾಮಾಜಿಕ ಜಾಲತಾಣ ವಲಯ ಸಂಯೋಜಕ ನಾಸೀರ್, ಅಲ್ಪಸಂಖ್ಯಾತ ಘಟಕದ ಜಿಲ್ಲಾ ಕಾರ್ಯದರ್ಶಿ ಕೆ.ಎಂ. ಬಾವ, ವೀರಾಜಪೇಟೆ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ರಫೀಕ್ ಕೋಲುಮಂಡ, ವೀರಾಜಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಇತರರಿದ್ದರು.