ಶನಿವಾರಸಂತೆ, ಆ. 14: ಶನಿವಾರಸಂತೆ ಹೋಬಳಿ ವ್ಯಾಪ್ತಿಯಲ್ಲಿ ಕೊರೊನಾ ವೈರಸ್ ಹೆಚ್ಚಾಗಿ ಹರಡುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪ್ರತಿ ಶನಿವಾರ ನಡೆಯುವ ಸಂತೆಯನ್ನು ಜಿಲ್ಲಾಧಿಕಾರಿಗಳ ಮುಂದಿನ ಆದೇಶದವರೆಗೆ ರದ್ದುಪಡಿಸಲಾಗಿದೆ ಎಂದು ಶನಿವಾರಸಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಜೆ. ಮೇದಪ್ಪ ತಿಳಿಸಿದ್ದಾರೆ.