ಕೂಡಿಗೆ, ಆ. 15: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಯನಗರ ಗ್ರಾಮದ ಸಮೀಪವಿರುವ ಮೀಸಲು ಅರಣ್ಯ ಪ್ರದೇಶದ ಬೆಟ್ಟದ ಬೃಹತ್ ಕಲ್ಲೊಂದು ಬೀಳುವ ಹಂತದಲ್ಲಿ ಇರುವುದನ್ನು ಗಮನಿಸಿ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿದರು.

ಜಿಲ್ಲಾಧಿಕಾರಿಯವರ ಆದೇಶದಂತೆ ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಗೋವಿಂದರಾಜ್, ಕುಶಾಲನಗರ ವಲಯ ಅರಣ್ಯಾಧಿಕಾರಿ ಅನನ್ಯಕುಮಾರ್, ಕುಶಾಲನಗರ ಹೋಬಳಿ ಕಂದಾಯ ಇಲಾಖೆಯ ಪರಿವೀಕ್ಷಕ ಮಧುಕುಮಾರ್, ಅತ್ತೂರು ಮೀಸಲು ಉಪವಲಯ ಅರಣ್ಯ ಅಧಿಕಾರಿ ಅನಿಲ್ ಡಿಸೋಜ, ಲೆಕ್ಕಾಧಿಕಾರಿ ಗುರುದರ್ಶನ್ ಸೇರಿದಂತೆ ಇಲಾಖೆಯ ಸಿಬ್ಬಂದಿಗಳು ಪರಿಶೀಲನೆ ನಡೆಸಿ ಈ ಬಗ್ಗೆ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.