ಮಡಿಕೇರಿ, ಆ. 16: ಪ್ರಸಕ್ತ ಸಾಲಿನಲ್ಲಿ ಉಪ್ಪಾರ ಮತ್ತು ಅದರ ಉಪ ಜಾತಿಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ಸಾಲ ಯೋಜನೆ ಮತ್ತು ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ ಮತ್ತು ಸಹಾಯಧನದ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆ ಗಳಲ್ಲಿ ಸೌಲಭ್ಯ ಪಡೆಯಲು ಇಚ್ಚಿಸುವವರು ಉಚಿತವಾಗಿ ಅರ್ಜಿ ನಮೂನೆ ಯನ್ನು ಜಿಲ್ಲಾ ಕಚೇರಿಯಲ್ಲಿ ಅಥವಾ ನಿಗಮದ ವೆಬ್‍ಸೈಟ್‍ನಲ್ಲಿ ಪಡೆದು ಅರ್ಜಿಯೊಂದಿಗೆ ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಫೋಟೋ ಮತ್ತು ವಿದ್ಯಾರ್ಥಿಗಳ ವ್ಯಾಸಂಗದ ದಾಖಲಾತಿಗಳನ್ನು ನಿಗಮದ ವೆಬ್‍ಸೈಟ್ WWW.ಜbಛಿಜಛಿ. ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಆನ್‍ಲೈನ್‍ನಲ್ಲಿ ಅಥವಾ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿ ದಾಖಲಾತಿಗಳೊಡನೆ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸೆಪ್ಟೆಂಬರ್ 5 ರೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ಕಚೇರಿಯಲ್ಲಿ ಅಥವಾ ದೂ. 08272-221656ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.