ಮಡಿಕೇರಿ, ಆ.15: ಸರ್ಕಾರ ಬೆಳೆ ಸಮೀಕ್ಷೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿರುವ ಕರಪತ್ರವನ್ನು ಉಸ್ತುವಾರಿ ಸಚಿವ ವಿ.ಸೋಮಣ್ಣ ಶನಿವಾರ ಬಿಡುಗಡೆ ಮಾಡಿದರು.

ಕರಪತ್ರ ಬಿಡುಗಡೆ ಮಾಡಿ ಮಾತನಾಡಿದ ಸಚಿವರು 2020-21ನೇ ಸಾಲಿನಲ್ಲಿ ಸರ್ಕಾರ ಕೃಷಿ ಇಲಾಖೆಯ ಮೂಲಕ ದೇಶದಲ್ಲಿ ಪ್ರಥಮ ಬಾರಿಗೆ ರೈತರೇ ಸ್ವತಃ ತಾವು ಬೆಳೆದ ಬೆಳೆಗಳ ಮಾಹಿತಿಗಳನ್ನು ಫಾರ್ಮರ್ಸ್ ಕ್ರಾಪ್ ಸರ್ವೇ ಆಪ್ 2020-21 ಮೂಲಕ ನಮೂದಿಸಲು ಸುವರ್ಣಾವಕಾಶವನ್ನು ಕಲ್ಪಿಸಿದೆ ಎಂದರು.

ಸಂಸದರಾದ ಪ್ರತಾಪ್ ಸಿಂಹ, ವಿಧಾನಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ತಹಶೀಲ್ದಾರ್ ಮಹೇಶ್ ಇತರರು ಇದ್ದರು.