ಆತ್ಮನಿರ್ಭರ ಭಾರತ, ಭಾರತೀಯರ ದಿವ್ಯ ಮಂತ್ರವಾಗಿದೆ : ಮೋದಿ
ನವದೆಹಲಿ, ಆ. 15: ಆತ್ಮನಿರ್ಭರ ಭಾರತ ಪರಿಕಲ್ಪನೆ ಪ್ರತೀ ಭಾರತೀಯರ ಮನಸ್ಸಿನಲ್ಲಿದ್ದು, ಈ ಕನಸು ಪ್ರತಿಜ್ಞೆಯಾಗಿ ಬದಲಾಗುತ್ತಿದೆ. ಇಂದು 130 ಕೋಟಿ ಭಾರತೀಯರ ಮನಸ್ಸಿನಲ್ಲಿ ಆತ್ಮನಿರ್ಭರ್ ಭಾರತ ಜನತೆಯ ದಿವ್ಯ ಮಂತ್ರವಾಗಿ ಮಾರ್ಪಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ.
ಐತಿಹಾಸಿಕ ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ಕೃಷಿ ಕ್ಷೇತ್ರದಲ್ಲಿ ನಾವು ‘ಆತ್ಮ ನಿರ್ಭರ’ರಾಗುತ್ತಿದ್ದೇವೆ. ಕೃಷಿ ಕ್ಷೇತ್ರಗಳಿಗೆ ಸಂಬಂಧಿಸಿದ ಕಾನೂನುಗಳನ್ನು ಸರಳಗೊಳಿಸಲಾಗಿದೆ. ವಿಶ್ವ ಕಲ್ಯಾಣದಲ್ಲಿ ಭಾರತದ ಕರ್ತವ್ಯವಿದೆ. ಭಾರತ ಸಶಕ್ತವಾಗಬೇಕಿದೆ.
ಕೇವಲ ಆಮದು ಕಡಿಮೆ ಮಾಡುವುದು ಮಾತ್ರ ಆತ್ಮ ನಿರ್ಭರವಲ್ಲ, ನಮ್ಮ ದೇಶೀಯ ವಸ್ತುಗಳನ್ನು ಮಾರ್ಕೆಟಿಂಗ್ ಮಾಡುವುದು, ಕೌಶಲ್ಯವನ್ನು ಹೆಚ್ಚಿಸುವುದು ಕೂಡ ಪ್ರಮುಖವಾಗಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಕೆಲವು ವಸ್ತುಗಳ ಅವಶ್ಯಕತೆ ಇತ್ತು, ವಿಶ್ವದಿಂದ ತರಿಸಿಕೊಳ್ಳುವ ಅಗತ್ಯವಿತ್ತು. ಆದರೆ ಸಿಗುತ್ತಿರಲಿಲ್ಲ. ಆದರೆ ಉದ್ಯಮಿಗಳು ಮನಸ್ಸು ಮಾಡಿ ಎನ್ 95 ಮಾಸ್ಕ್ ತಯಾರಿಕೆಯಿಂದ ಹಿಡಿದು ಸಾಕಷ್ಟು ಕೆಲಸವನ್ನು ಮಾಡಿದ್ದಾರೆ. ಬೇರೆ ದೇಶಗಳಿಗೆ ರಫ್ತನ್ನು ಕೂಡ ಮಾಡಿದ್ದೇವೆ. ವೋಕಲ್ ಫಾರ್ ಲೋಕಲ್ ಎನ್ನುವುದು ದೇಶದ ಮಂತ್ರವಾಗಿರಬೇಕು ಎಂದು ಹೇಳಿದರು.
ಕ್ರಿಕೆಟ್‍ಗೆ ಎಂಎಸ್ ಧೋನಿ ವಿದಾಯ
ನವದೆಹಲಿ, ಆ. 15: ಅಂತರರಾಷ್ಟ್ರೀಯ ಕ್ರಿಕೆಟ್‍ಗೆ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ವಿದಾಯ ಘೋಷಿಸಿದ್ದಾರೆ. 2004ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‍ಗೆ ಎಂಎಸ್ ಧೋನಿ ಪಾದಾರ್ಪಣೆ ಮಾಡಿದ್ದರು. ಧೋನಿ ನೇತೃತ್ವದಲ್ಲಿ ಭಾರತ 2008ರ ಟಿ20 ವಿಶ್ವಕಪ್ ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಕಪ್ ಗೆದ್ದು ಬೀಗಿತ್ತು.