ಸೋಮವಾರಪೇಟೆ, ಆ. 15: ಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಕೆ.ಜೆ. ಹಳ್ಳಿಯಲ್ಲಿ ನಡೆದ ಕೋಮು ಹಿಂಸಾಚಾರವು ಮತಾಂಧ ರಾಜಕಾರಣದ ಷಡ್ಯಂತ್ರವಾಗಿದ್ದು, ಇಂತಹ ಕೃತ್ಯವನ್ನು ಕರ್ನಾಟಕ ರೈತ ಸಂಘ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಹೆಚ್. ಸಣ್ಣಪ್ಪ ಹಾಗೂ ರಾಜ್ಯ ಕಾರ್ಯದರ್ಶಿ ಡಿ.ಎಸ್. ನಿರ್ವಾಣಪ್ಪ ತಿಳಿಸಿದ್ದಾರೆ. ಸರ್ಕಾರವು ತಕ್ಷಣ ಘಟನೆಗೆ ಕಾರಣರಾದ ನಿಜವಾದ ಆರೋಪಿಗಳನ್ನು ಪತ್ತೆಹಚ್ಚಿ ಶಿಕ್ಷೆಗೆ ಗುರಿಪಡಿಸಬೇಕು. ಗಲಭೆಯಲ್ಲಿ ಪ್ರಾಣ ಕಳೆದುಕೊಂಡವರಿಗೆ, ಆಸ್ತಿ ಪಾಸ್ತಿ, ಬದುಕು ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.