ಮಡಿಕೇರಿ, ಆ. 15: ಜಿಲ್ಲೆಯ ಮಡಿಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿರುವ ಪರೀಕ್ಷಾ ಕೇಂದ್ರಗಳಲ್ಲಿ ತಾ. 18, 19 ಮತ್ತು 20 ರಂದು ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಕರ್ನಾಟಕ ಲೋಕಸೇವಾ ಆಯೋಗದ 2020ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶಿಸಿದ್ದಾರೆ.