ಗೋಣಿಕೊಪ್ಪ ವರದಿ, ಆ. 15 : ಹೈಸೊಡ್ಲೂರು ಗ್ರಾಮದಲ್ಲಿನ ಸರ್ಕಾರಿ ಜಾಗದಲ್ಲಿ ನೆಲೆಸಿರುವ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹುದಿಕೇರಿ ನಾಡಕಚೇರಿ ಎದುರು ದ.ಸಂ.ಸ. ವತಿಯಿಂದ ಶನಿವಾರ ಪ್ರತಿಭಟನೆ ನಡೆಯಿತು.
ಈ ಸಂದರ್ಭ ತಹಶೀಲ್ದಾರ್ ನಂದೀಶ್, ಇಒ ಷಣ್ಮುಗಂ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರು. ಈ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳುವುದಾಗಿ ತಹಶೀಲ್ದಾರ್ ನಂದೀಶ್ ಭರವಸೆ ನೀಡಿದರು.
15 ದಿನಗಳಲ್ಲಿ ಸೂಕ್ತ ಕ್ರಮಕೈಗೊಳ್ಳದಿದ್ದಲ್ಲಿ ಮತ್ತೆ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಈ ಸಂದರ್ಭ ಡಿಎಸ್ಎಸ್ ವಿಭಾಗೀಯ ಸಂಚಾಲಕ ಕೃಷ್ಣಪ್ಪ, ಜಿಲ್ಲಾ ಸಂಚಾಲಕ ಪರಶುರಾಮ್, ಕರ್ಕು, ಗಣೇಶ್ ಇದ್ದರು.