ಹೆಬ್ಬಾಲೆ, ಆ. 16: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಸದಸ್ಯರಾಗಿ ಹಿರಿಯ ಸಾಹಿತಿ ಡಾ.ಹೆಬ್ಬಾಲೆ ಕೆ.ನಾಗೇಶ್ ಅವರನ್ನು ನಾಮ ನಿರ್ದೇಶನ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸೋಮವಾರಪೇಟೆ ತಾಲೂಕಿನ ಹೆಬ್ಬಾಲೆ ಗ್ರಾಮದ ಬಿ.ಎಸ್. ಕೆಂಚಯ್ಯ ಮತ್ತು ಮುತ್ತಮ್ಮ ದಂಪತಿಗಳ ಪುತ್ರರಾಗಿ ಜನಿಸಿದ ನಾಗೇಶ್, ಪ್ರಸ್ತುತ ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಜಾನಪದ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಂಗೀತ ನೃತ್ಯ ಅಕಾಡೆಮಿಯ ಕಾರ್ಯ ಚಟುವಟಿಕೆಗಳು ಸುಸೂತ್ರವಾಗಿ ಯಶಸ್ವಿಯಾಗಿ ನಡೆಸಲು ತಮ್ಮ ಸಲಹೆ ಸಹಕಾರವನ್ನು ನೀಡುವಂತೆ ಅಕಾಡೆಮಿ ರಿಜಿಸ್ಟರ್ ಬನಶಂಕರಿ ವಿ.ಅಂಗಡಿ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.