ಕೊಡಗು ಜಿಲ್ಲಾ ಕಾಂಗ್ರೆಸ್: ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್‍ಕುಮಾರ್, ಮಹಾತ್ಮ ಗಾಂಧಿಯವರ ನೇತೃತ್ವದಲ್ಲಿ ಅನೇಕರ ತ್ಯಾಗ ಬಲಿದಾನ ಮತ್ತು ಹೋರಾಟಗಳಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ ಎಂದು ಬಣ್ಣಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಪಿ. ಚಂದ್ರಕಲಾ, ಹಿರಿಯ ಮುಖಂಡರಾದ ಟಿ.ಪಿ. ರಮೇಶ್, ಟಿ.ಎಂ. ಅಯ್ಯಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಸುರಯ್ಯಾ ಅಬ್ರಾರ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎಂ.ಎ. ಉಸ್ಮಾನ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರ ಮೈನಾ, ಡಿಸಿಸಿ ವಕ್ತಾರ ಟಿ.ಇ. ಸುರೇಶ್, ಸೇವಾದಳದ ಬ್ಲಾಕ್ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ನಗರ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ರಜಾಕ್, ಮಾಜಿ ನಗರಸಭಾ ಸದಸ್ಯ ಪ್ರಕಾಶ್ ಆಚಾರ್ಯ, ರಾಜ್ಯ ಪದಾಧಿಕಾರಿ ಎಂ.ಎ. ಉಸ್ಮಾನ್, ಡಿಸಿಸಿ ಸದಸ್ಯೆ ಗೀತಾ ಧರ್ಮಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ಸದಾ ಮುದ್ದಪ್ಪ, ಮಹಿಳಾ ನಗರಾಧ್ಯಕ್ಷೆ ಫ್ಯಾನ್ಸಿ ಪಾರ್ವತಿ, ಎಸ್.ಸಿ. ಘಟಕದ ನಗರಾಧ್ಯಕ್ಷ ಮುದ್ದುರಾಜ್ ಸೇರಿದಂತೆ ಮತ್ತಿತರರು ಇದ್ದರು.
ಡಿ.ಸಿ.ಸಿ. ಬ್ಯಾಂಕ್-ವೀರಾಜಪೇಟೆ: ವೀರಾಜಪೇಟೆಯಲ್ಲಿರುವ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ, ನಿರ್ದೇಶಕರು, ಸಿಬ್ಬಂದಿಗಳು ಪಾಲ್ಗೊಂಡು ಗೌರವ ಸಲ್ಲಿಸಿದರು.
ಜಿಲ್ಲಾ ಜೆಡಿಎಸ್: ಕೊಡಗು ಜಿಲ್ಲಾ ಜೆಡಿಎಸ್‍ನಿಂದ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ಧ್ವಜಾರೋಹಣ ನೆರವೇರಿಸಿದರು.
ಜೆಡಿಎಸ್‍ನ ಸಂಘಟನಾ ಕಾರ್ಯದರ್ಶಿ ಬೊಳ್ಳಿಯಂಡ ಗಣೇಶ್, ಮಹಿಳಾ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೀಲಾ ಶೇಷಮ್ಮ, ಯುವ ಜೆಡಿಎಸ್‍ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಾಸಿರ್, ಜಿಲ್ಲಾ ಸಮಿತಿ ಕಾರ್ಯದರ್ಶಿ ಸುನಿಲ್, ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕ ಸೈಫ್ ಅಲಿ, ಯುವ ಜೆಡಿಎಸ್‍ನ ವಕ್ತಾರ ರವಿಕಿರಣ್, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಸುಕೇಶ್ ಚಂಗಪ್ಪ, ಮಡಿಕೇರಿ ನಗರ ಯುವ ಜೆಡಿಎಸ್ ಅಧ್ಯಕ್ಷ ಮೋನಿಷ್, ನಗರ ಮಹಿಳಾ ಘಟಕದ ಅಧ್ಯಕ್ಷೆ ಸುನಂದಾ ಮೊದಲಾದವರು ಪಾಲ್ಗೊಂಡಿದ್ದರು.ಕರ್ನಾಟಕ ಸಂಘ: ವೀರಾಜಪೇಟೆಯ ಕರ್ನಾಟಕ ಸಂಘದಿಂದ 74ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಘದ ಅಧ್ಯಕ್ಷ ಮಾಳೇಟಿರ ಬೆಲ್ಲು ಬೋಪಯ್ಯ ಧ್ವಜಾರೋಹಣ ಮಾಡಿ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಈ ಸಂದರ್ಭ ಸಂಘದ ಕಾರ್ಯದರ್ಶಿ ಮೂಕಚಂಡ ಅರುಣ್ ಅಪ್ಪಣ್ಣ, ಖಜಾಂಚಿ ಕೊಟೇರ ಗಣೇಶ್ ತಮ್ಮಯ್ಯ, ಚಿಲ್ಲವಂಡ ಕಾವೇರಪ್ಪ, ಅಪ್ಪನೆರವಂಡ ಜೋಯಪ್ಪ, ಬಿ.ಆರ್. ಗಣೇಶ್, ಪುಗ್ಗೇರ ನಂದಾ, ಬಿ. ಸುರೇಶ್ ಹಾಗೂ ಎಂ. ಕುಸುಮ ಹಾಜರಿದ್ದರು.
ಅಂಬೇಡ್ಕರ್ ಯುವಕ ಸಂಘ: ಅಂಬೇಡ್ಕರ್ ಯುವಕ ಸಂಘದ ವತಿಯಿಂದ 74ನೇ ಸ್ವಾತಂತ್ರ್ಯೋತ್ಸವವನ್ನು ಕಲ್ಲುಮೊಟ್ಟೆ (ಆದರ್ಶನಗರ) ಸಮುದಾಯ ಭವನದಲ್ಲಿ ಆಚರಿಸಲಾಯಿತು.
ಗ್ರಾ.ಪಂ. ಮಾಜಿ ಸದಸ್ಯೆ ಸುಶೀಲಮ್ಮ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಅಂಬೇಡ್ಕರ್ ಯುವಕ ಸಂಘದ ನಿರ್ದೇಶಕ ಬಶೀರ್ ಅಲಿ ಪ್ರಾಸ್ತಾವಿಕ ನುಡಿಯಾಡಿದರು. ಇದೇ ಸಂದರ್ಭ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಂಘದ ಅಧ್ಯಕ್ಷ ಎಂ.ಎಂ. ಸೀನ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಆಸಿಫ್ ಅಲಿ, ಸಹಕಾರ್ಯದರ್ಶಿ ಜಮಾಲ್, ಸದಸ್ಯ ಅಜೀಜ್ ಹಾಗೂ ಪ್ರಮುಖರಾದ ಆಶಾಲತ ಉಪಸ್ಥಿತರಿದ್ದರು.
ಎಸ್‍ಕೆಎಸ್‍ಎಸ್‍ಎಫ್ ಸುಂಟಿಕೊಪ್ಪ: ಸುಂಟಿಕೊಪ್ಪದ ಸುನ್ನಿ ಶಾಫಿ ಜುಮ್ಮಾ ಮಸೀದಿ ಹಾಗೂ ಎಸ್‍ಕೆಎಸ್‍ಎಸ್‍ಎಫ್ ಜಂಟಿ ಆಶ್ರಯದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಮಸೀದಿ ಆವರಣದಲ್ಲಿ ಸಿ.ಎಂ. ಹಮೀದ್ ಮೌಲವಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಎಸ್‍ಕೆಎಸ್‍ಎಸ್‍ಎಫ್ ಫ್ರೀಡಂ ಸ್ಟಾರ್ ಅಂಗವಾಗಿ ನಾಸಿರ್ ಫೈಝಿ ಅವರು ಪ್ರತಿಜ್ಞಾ ವಿಧಿ ಭೋದನೆ ಮಾಡಿದರು.
ಕಾರ್ಯಕ್ರಮದಲ್ಲಿ ಮಸೀದಿ ಆಡಳಿತ ಮಂಡಳಿಯ ಉಪಾಧ್ಯಕ್ಷ ರಫೀಕ್ ಹಾಜಿ, ಕಾರ್ಯದರ್ಶಿ ಸೂಫಿ, ಖಜಾಂಚಿ ಮೊಹಮ್ಮದ್, ಕೆ.ಎ. ಉಸ್ಮಾನ್ ಎಸ್‍ಕೆಎಸ್‍ಎಸ್‍ಎಫ್ ಶಾಖೆಯ ಅಧ್ಯಕ್ಷ ಅಶ್ರಫ್ ಅಸ್ ಹರಿ, ಕಾರ್ಯದರ್ಶಿ ಪರಾಸ್, ಕೆ. ಯು. ನೌಫಲ್ ಮತ್ತಿತರರು ಪಾಲ್ಗೊಂಡಿದ್ದರು.ಬಾಳೆಲೆ ವಿದ್ಯಾಸಂಸ್ಥೆ: ಅನೇಕ ಮಹನೀಯರ ತ್ಯಾಗ ಬಲಿದಾನದ ಫಲವಾಗಿ ಲಭಿಸಿದ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂದು ಬಾಳೆಲೆ ಸೆಂಟರ್ ಎಜುಕೇಷನ್ ಸೊಸೈಟಿ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಹೇಳಿದರು.
ಬಾಳೆಲೆ ವಿಜಯಲಕ್ಷ್ಮಿ ಪಿಯು ಕಾಲೇಜಿನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದರು. ಕೊರೊನಾ ಸಂಕಷ್ಟದ ನಡುವೆ ದೇಶದಲ್ಲಿ ನಡೆಯುತ್ತಿರುವ ಸ್ವಾತಂತ್ರ್ಯ ಉತ್ಸವ ಕಳೆಗುಂದಿದೆ. ಆದರೆ ಅದು ಜನತೆಯ ಭಾವನೆಯಿಂದ ದೂರವಾಗಿಲ್ಲ. ಸುಭಾಶ್ ಚಂದ್ರಬೋಸ್ ಅವರ ತೀವ್ರಗಾಮಿತನ, ಗಾಂಧೀಜಿಯರ ಅಹಿಂಸಾ ನೀತಿ ಇವೆರಡೂ ಸ್ವಾತಂತ್ರ್ಯ ಚಳುವಳಿಯಲ್ಲಿ ಉತ್ತಮ ಫಲ ತಂದುಕೊಟ್ಟವು ಎಂದು ಹೇಳಿದರು. ಪ್ರಾಂಶುಪಾಲ ಡಾ. ಜೆ. ಸೋಮಣ್ಣ ಮಾತನಾಡಿದರು. ಆಡಳಿತ ಮಂಡಳಿ ಕಾರ್ಯದರ್ಶಿ ಚಿಮ್ಮಣಮಾಡ ಕೃಷ್ಣ ಗಣಪತಿ, ಸಹ ಕಾರ್ಯದರ್ಶಿ ಪೋಡಮಾಡ ಮೋಹನ್, ನಿರ್ದೇಶಕರಾದ ಕಾಟಿಮಾಡ ಶರೀನ್ ಮುತ್ತಣ್ಣ, ಮೇಚಂಡ ಪೆಮ್ಮಯ್ಯ, ಅಡ್ಡೆಂಗಡ ಸಜನ್, ಮುಖ್ಯ ಶಿಕ್ಷಕ ಕೆ. ಚಂದ್ರಶೇಖರ್ ಹಾಜರಿದ್ದರು.
ಮಡಿಕೇರಿ ಆಕಾಶವಾಣಿ: ಮಡಿಕೇರಿ ಆಕಾಶವಾಣಿ ಕೇಂದ್ರದಲ್ಲಿ ಸರಳವಾಗಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು.
ಹಿರಿಯ ಉದ್ಘೋಷಕ ಸುಬ್ರಾಯ ಸಂಪಾಜೆ ಮತ್ತು ಪ್ರಸಾರ ನಿರ್ವಾಹಕ ಬಿ. ದಿಗ್ವಿಜಯ್ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದ ನಿರ್ವಾಹಕ ಡಾ. ವಿಜಯ ಅಂಗಡಿ, ಹಿರಿಯ ಉದ್ಘೋಷಕಿ ಕೂಪದಿರ ಶಾರದಾ ನಂಜಪ್ಪ, ಇಂಜಿನಿಯರಿಂಗ್ ವಿಭಾಗದ ರೆಂಜಿತ್, ಸಂತೋಷ್, ಲೋಕೇಶ್, ಆಡಳಿತ ವಿಭಾಗದ ನಾರಾಯಣ್, ಚಂದ್ರ, ರಾಮಾ ನಾಯಾಕ್, ನಿಲಯದ ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
*ಕೊಡ್ಲಿಪೇಟೆ: ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ವಿವಿಧ ಸಂಘಟನೆಗಳ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಬ್ಯಾಟಗೊಟ್ಟದ ಮಸ್ಜಿದುನ್ನೂರ್ ಮದರಸ, ಎಸ್.ಕೆ.ಎಸ್.ಎಸ್.ಎಫ್. ಮತ್ತು ಎಸ್.ಎಸ್.ಎಫ್., ಎಸ್.ವ್ಯೆ.ಎಸ್. ಧಾರ್ಮಿಕ ಸಂಘಟನೆಗಳ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.
ಇದರೊಂದಿಗೆ ಹ್ಯಾಂಡ್ಪೋಸ್ಟ್‍ನಲ್ಲಿರುವ ಮಸ್ಜಿದ್ ಆವರಣದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ಸುಲೈಮಾನ್ ದ್ವಜಾರೋಹಣ ಮಾಡಿದರು. ಈ ಸಂದರ್ಭ ಧರ್ಮಗುರುಗಳಾದ ಹಾರೀಸ್ ಬಾಖವಿ, ಝಹೀರ್ ನಿಝಾಮಿ, ರಝಾಕ್ ಪ್ಯೆಝಿ, ಕಾರ್ಯದರ್ಶಿ ಮಹಮ್ಮದ್ ಹನೀಫ್ ಉಪಸ್ಥಿತರಿದ್ದರು.
ಹ್ಯಾಂಡ್ಪೋಸ್ಟ್ ಜಂಕ್ಷನ್ ನಲ್ಲಿರುವ ಎಸ್.ಕೆ.ಎಸ್.ಎಸ್.ಎಫ್. ಕಚೇರಿಯಲ್ಲಿ ಧ್ವಜಾರೋಹಣ ಮಾಡಿ ಪ್ರತಿಜ್ಞಾ ವಿಧಿ ಸ್ವೀಕರಿಸುವ ಮೂಲಕ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಸಮೀಪವಿರುವ ಎಸ್.ಎಸ್.ಎಫ್., ಎಸ್.ವೈ.ಎಸ್. ಕಚೇರಿಯಲ್ಲಿ ಧ್ವಜಾರೋಹಣ ಮಾಡಲಾಯಿತು.
ಕೊಡ್ಲಿಪೇಟೆ ನಗರದಲ್ಲಿರುವ ಹನಫಿ ಜಾಮೀಯಾ ಮಸ್ಜಿದ್‍ನಲ್ಲಿ ಆಡಳಿತ ಮಂಡಳಿ ಸದಸ್ಯರುಗಳು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಮಸೀದಿ ಆಡಳಿತ ಮಂಡಳಿಯ ಸದಸ್ಯರುಗಳು, ಜಮಾಅತ್ ಸದಸ್ಯರುಗಳು, ಧಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕರ್ತರುಗಳು ಉಪಸ್ಥಿತರಿದ್ದರು.ನಲ್ವತ್ತೋಕ್ಲು ಜುಮಾ ಮಸೀದಿ: ನಲ್ವತ್ತೋಕ್ಲಿನ ಮೊಹಿದ್ದೀನ್ ಜುಮಾ ಮಸೀದಿ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಮಸೀದಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಸೀದಿಯ ಆಡಳಿತ ಮಂಡಳಿ ಅಧ್ಯಕ್ಷ ದುದ್ದಿಯಂಡ ಹೆಚ್. ಸೂಫಿ ಹಾಜಿ ಧ್ವಜಾರೋಹಣ ನೆರವೇರಿಸಿದರು. ಸಾಮೂಹಿಕವಾಗಿ ರಾಷ್ಟ್ರ ಗೀತೆಯನ್ನು ಹಾಡಲಾಯಿತು.
ಕಾರ್ಯಕ್ರಮದಲ್ಲಿ ಮಸೀದಿಯ ಧರ್ಮ ಗುರುಗಳಾದ ಜ್ಹಿಯಾದ್ ದಾರಿಮಿ, ಸಿದ್ದೀಕ್ ಪಾಲಿಲಿ, ನಲ್ವತ್ತೋಕ್ಲಿನ ಮಹದಿ ತಂಗಳ್ ಸೇರಿದಂತೆ ಆಡಳಿತ ಮಂಡಳಿ ಪದಾಧಿಕಾರಿಗಳು, ಗ್ರಾಮಸ್ಥರು ಮತ್ತು ನಲ್ವತ್ತೋಕ್ಲಿನ ಬುಸ್ತಾನುಲ್ ಉಲುಮ್ ಮದರಸಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಓಂಕಾರ್ ಆಟೋ ನಿಲ್ದಾಣ: ನಗರದ ಬ್ರಾಹ್ಮಣರ ಬೀದಿಯ ಓಂಕಾರ್ ಆಟೋ ನಿಲ್ದಾಣದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ನಗರ ಠಾಣೆಯ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹೋರಾಟಗಾರರ ತ್ಯಾಗವನ್ನು ಸ್ಮರಿಸಿದರು.
ಪ್ರಮುಖರಾದ ಸುನೀಲ್, ಹೇಮಂತ್ ಕುಮಾರ್ ಹಾಗೂ ಚಾಲಕರು ಹಾಜರಿದ್ದರು.
ಕಣಿವೆ: ಹರದೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಸ್ವಾತಂತ್ರ್ಯ ಧ್ವಜಾರೋಹಣವನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ. ಲೋಕೇಶ್ ನೆರವೇರಿಸಿದರು.ಕುಶಾಲನಗರ: 74ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಕುಶಾಲನಗರ ಸೇರಿದಂತೆ ಸುತ್ತಮುತ್ತಲ ಸಂಘ-ಸಂಸ್ಥೆಗಳು, ಸರಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಕುಶಾಲನಗರದ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಡಳಿತ ವೈದ್ಯಾಧಿಕಾರಿ ಡಾ. ಮಧುಸೂದನ್ ಧ್ವಜಾರೋಹಣ ನೆರವೇರಿಸಿದರು. ವೈದ್ಯರು, ದಾದಿಯರು, ಆಂಬುಲೆನ್ಸ್ ಚಾಲಕರು ಹಾಗೂ ಗ್ರೂಪ್ ಡಿ ದರ್ಜೆ ನೌಕರರನ್ನು ಸ್ವಾತಂತ್ರ್ಯೋತ್ಸವದ ಅಂಗವಾಗಿ ಸನ್ಮಾನಿಸಲಾಯಿತು. ಕೋವಿಡ್ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ ಕೊರೊನಾ ವಾರಿಯರ್ಸ್‍ಗಳನ್ನು ಸನ್ಮಾನಿಸಲಾಯಿತು.
ವೀರಾಜಪೇಟೆ ಪಟ್ಟಣ ಪಂಚಾಯಿತಿ: ವೀರಾಜಪೇಟೆ ಪಟ್ಟಣ ಪಂಚಾಯಿತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೊರೊನಾ ವೈರಸ್‍ನಿಂದ ಗೆದ್ದು ಬಂದ ಇಲ್ಲಿನ ಶಾಂತಿನಗರದ ನಿಸ್ಸಾರ್ ಅಹಮ್ಮದ್, ಅಪ್ಪಯ್ಯ ಸ್ವಾಮಿ ರಸ್ತೆಯ ಚಂದ್ರಶೇಖರ್ ಹಾಗೂ ಗಾಂಧಿನಗರದ ಭರತ್ ಇವರುಗಳನ್ನು ಸನ್ಮಾನಿಸಲಾಯಿತು. ಸನ್ಮಾನಗೊಂಡ ಮೂವರು ಮಡಿಕೇರಿ ಕೋವಿಡ್ 19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ತಮ್ಮ ಅನುಭವಗಳನ್ನು ಹಂಚಿಕೊಂಡರು. 74ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪಟ್ಟಣ ಪಂಚಾಯಿತಿ ಆಡಳಿತಾಧಿಕಾರಿ ಎಲ್.ಎಂ. ನಂದೀಶ್ ಧ್ವಜರೋಹಣ ಮಾಡಿದರು. ಮುಖ್ಯಾಧಿಕಾರಿ ಶ್ರೀಧರ್, ಅಭಿಯಂತರ ಎಂ.ಪಿ. ಹೇಮ್‍ಕುಮಾರ್ ದಿನದ ಮಹತ್ವದ ಕುರಿತು ಮಾತನಾಡಿದರು. ಈ ಸಂದರ್ಭ ಪಟ್ಟಣ ಪಂಚಾಯಿತಿ ಸದಸ್ಯರುಗಳು, ಕಚೇರಿ ಸಿಬ್ಬಂದಿಗಳು ಹಾಜರಿದ್ದರು.
ಪತ್ರಕರ್ತರ ಸಂಘ: ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿ ಆವರಣದಲ್ಲಿ ಸಂಘದ ಅಧ್ಯಕ್ಷ ರಘು ಹೆಬ್ಬಾಲೆ ಧ್ವಜಾರೋಹಣ ನೆರವೇರಿಸಿದರು. ಸಂಘದ ಪದಾಧಿಕಾರಿಗಳಾದ ಕೆ.ಕೆ. ನಾಗರಾಜಶೆಟ್ಟಿ, ಸುನಿಲ್ ಪೊನ್ನೇಟಿ, ಕುಡೆಕಲ್ ಗಣೇಶ್, ವಿನೋದ್ ಇದ್ದರು.
ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ: ಚಿಕ್ಕ ಅಳುವಾರದಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ ಮಾನವಿಕ ಸಂಕೀರ್ಣದಲ್ಲಿ 74ನೇ ಸ್ವಾತಂತ್ರ್ಯೋತ್ಸವನ್ನು ಆಚರಣೆ ಮಾಡಲಾಯಿತು. ಸಂಸ್ಥೆಯ ಪ್ರಭಾರ ನಿರ್ದೇಶಕ ಪೆÇ್ರ. ಕೆ.ಎಸ್. ಚಂದ್ರಶೇಖರಯ್ಯ ಧ್ವಜಾರೋಹಣ ನೇರವೇರಿಸಿದರು. ವಿವಿಧ ವಿಭಾಗದ ಪ್ರಾಧ್ಯಾಪಕರು ಮತ್ತು ಆಡಳಿತ ವರ್ಗದವರು ಉಪಸ್ಥಿತರಿದ್ದರು.