ಬಾಳಲೆ, ಆ. 16: ಇಲ್ಲಿಗೆ ಸಮೀಪದ ನಿಟ್ಟೂರು - ಕಾರ್ಮಾಡು ಗ್ರಾಮದಲ್ಲಿ ಹುಲಿ ಹೆಜ್ಜೆ ಗುರುತು ಕಂಡು ಬಂದಿದ್ದು, ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಅಲ್ಲಿನ ಕರ್ತಮಾಡ ಅನಿಲ್ ಅಯ್ಯಣ್ಣ ಅವರ ತೋಟದಲ್ಲಿ ಹುಲಿಯ ಹೆಜ್ಜೆ ಗುರುತು ಅಲ್ಲಲ್ಲಿ ಕಂಡು ಬಂದಿದೆ. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಕಲ್ಲಳ್ಳ ವಿಭಾಗದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.