ಕುಶಾಲನಗರ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ ಕುಶಾಲನಗರದ ಫಾತಿಮಾ ಕಾನ್ವೆಂಟ್ ಪ್ರೌಢಶಾಲೆಯ ವಿದ್ಯಾರ್ಥಿ ಜಗತ್ ಪೂವಯ್ಯ ಅವರನ್ನು ಡಾ. ಬಿ.ಆರ್. ಅಂಬೇಡ್ಕರ್ ಜನಪರ ವೇದಿಕೆ ಕೊಡಗು ಜಿಲ್ಲಾ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಜಿಲ್ಲಾಧ್ಯಕ್ಷ ಹೆಚ್.ಸಿ. ಜಯಪ್ರಕಾಶ್, ತಾಲೂಕು ಅಧ್ಯಕ್ಷ ಆದಮ್, ಪತ್ರಕರ್ತ ಟಿ.ಆರ್. ಪ್ರಭುದೇವ್, ಸಂಘಟನೆಯ ಮುಖಂಡರುಗಳಾದ ಮಹಮ್ಮದ್ ಮುಸ್ತಫ, ಕುಮಾರ್, ವಿದ್ಯಾರ್ಥಿಯ ಪೆÇೀಷಕರು ಇದ್ದರು.ಸೋಮವಾರಪೇಟೆ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿರುವ ಪಟ್ಟಣದ ಮಹದೇಶ್ವರ ಬಡಾವಣೆ ನಿವಾಸಿ, ಸಾಂದೀಪನಿ ಶಾಲೆಯ ವಿದ್ಯಾರ್ಥಿನಿ ಎಸ್. ಗಾನಾಳನ್ನು ಶಿಕ್ಷಣ ಇಲಾಖೆಯ ವತಿಯಿಂದ ಸನ್ಮಾನಿಸಲಾಯಿತು.
ಮಹದೇಶ್ವರ ಬಡಾವಣೆಯಲ್ಲಿರುವ ವಿದ್ಯಾರ್ಥಿನಿಯ ಮನೆಗೆ ತೆರಳಿದ ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡು ಸೇರಿದಂತೆ ಇತರ ಅಧಿಕಾರಿಗಳು, ಶಾಲಾಡಳಿತ ಮಂಡಳಿಯ ಪ್ರಮುಖರು, ವಿದ್ಯಾರ್ಥಿನಿ ಗಾನಾಳಿಗೆ ಫಲತಾಂಬೂಲ ನೀಡಿ ಅಭಿನಂದಿಸಿದರು.
ಈ ಸಂದರ್ಭ ಪೋಷಕರಾದ ಸುಜಿತ್ ಮತ್ತು ಸೀಮಾ, ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್, ತಾಲೂಕು ಕ್ರೀಡಾ ಅಧೀಕ್ಷಕ ಸದಾಶಿವ ಪಲ್ಲೇದ್, ಸಾಂದೀಪನಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಎಂ.ಟಿ. ದಾಮೋಧರ್, ಮುಖ್ಯ ಶಿಕ್ಷಕ ಮಾರ್ಷಲ್ ಲೋಬೋ ಸೇರಿದಂತೆ ಇತರರು ಉಪಸ್ಥಿತರಿದ್ದರು.ಕೂಡಿಗೆ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ವಿಜಯ್ ಎಂ.ಡಿ. ಅವರನ್ನು ಶಿಕ್ಷಣ ಇಲಾಖೆ ಪರವಾಗಿ ಸನ್ಮಾನ ಮಾಡಲಾಯಿತು.
ಈ ಸಂದರ್ಭ ಕ್ಷೇತ್ರಶಿಕ್ಷಣಾಧಿಕಾರಿ ಹೆಚ್.ಕೆ. ಪಾಂಡುರಂಗ, ತಾಲೂಕು ಕ್ರೀಡಾ ಅಧೀಕ್ಷಕ ಸದಾಶಿವ ಪಲ್ಲೇದ್, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಪ್ರಕಾಶ್, ಸಹ ಶಿಕ್ಷಕ ದೊಡ್ಡಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ರಾಜೇಶ್, ಚಿದಾನಂದ್ ಹಾಗೂ ವಿದ್ಯಾರ್ಥಿಯ ಪೋಷಕರು ಉಪಸ್ಥಿತರಿದ್ದರು.ಮಡಿಕೇರಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಡಿಕೇರಿ ತಾಲೂಕಿನ ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕವನ ಪಿ.ಎಸ್. 590 (ಶೇ. 94.4) ಅಂಕಗಳನ್ನು ಪಡೆದು ಸರ್ಕಾರಿ ಶಾಲೆಗಳಲ್ಲಿ ಮಡಿಕೇರಿ ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿದ್ದಾಳೆ.
ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ ಸನ್ಮಾನಿಸಿ, ಅಭಿನಂದಿಸಿದರು. ಈ ಸಂದರ್ಭ ಹಾಕತ್ತೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಕೆ.ಎ. ರಾಮಚಂದ್ರ, ವಿದ್ಯಾರ್ಥಿನಿಯ ಪೋಷಕರಾದ ಸುಂದರ ಮತ್ತು ಸುನೀತಾ ಹಾಜರಿದ್ದರು.