ಸೋಮವಾರಪೇಟೆ,ಆ.15: 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ತಾಲೂಕು ಆಡಳಿತದ ವತಿಯಿಂದ ಇಲ್ಲಿನ ತಾಲೂಕು ಕಚೇರಿ ಆವರಣದಲ್ಲಿ ಆಚರಿಸಲಾಯಿತು. ತಾಲೂಕು ತಹಶೀಲ್ದಾರ್ ಹಾಗೂ ದಂಡಾಧಿಕಾರಿಗಳಾದ ಗೋವಿಂದರಾಜು ಅವರು ಧ್ವಜಾರೋಹಣ ನೆರವೇರಿಸಿದರು.

ಪೊಲೀಸ್ ವೃತ್ತ ನಿರೀಕ್ಷಕ ನಂಜುಂಡೇಗೌಡ, ಠಾಣಾಧಿಕಾರಿ ಶಿವಶಂಕರ್ ಸೇರಿದಂತೆ ಸಿಬ್ಬಂದಿಗಳಿಂದ ಗೌರವ ವಂದನೆ ನಡೆಯಿತು. ಪಿ.ಎನ್. ಹೆರಿಟೇಜ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಿವೃತ್ತ ಮೇಜರ್ ಮಂದಪ್ಪ ಹಾಗೂ ತಾಲೂಕು ಕಚೇರಿಯ ಡಿ.ಗ್ರೂಪ್ ನೌಕರ ಕೃಷ್ಣ ಅವರನ್ನು ಸನ್ಮಾನಿಸಲಾಯಿತು.

ಇದೇ ಸಂದರ್ಭ ಹೆರಿಟೇಜ್ ಸಂಸ್ಥೆಯಿಂದ ತಾಲೂಕು ಕಚೇರಿಗೆ ಸ್ಯಾನಿಟೈಸರ್ ಸ್ಟ್ಯಾಂಡ್, ತಾಲೂಕು ಕಚೇರಿ ಮತ್ತು ಪೊಲೀಸ್ ಇಲಾಖಾ ಸಿಬ್ಬಂದಿಗಳಿಗೆ ಮಾಸ್ಕ್‍ಗಳನ್ನು ವಿತರಿಸಲಾಯಿತು. ಸಂಸ್ಥೆಯ ಮಾಲೀಕರ ಪ್ರಭುದೇವ್ ಸೇರಿದಂತೆ ತಾಲೂಕು ಕಚೇರಿಯ ಸಿಬ್ಬಂದಿಗಳು ಭಾಗವಹಿಸಿದ್ದರು.