ಕೂಡಿಗೆ, ಆ.17: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿರುವ ಡಿ.ವೈ.ಎಸ್ಪಿ. ಹೆಚ್.ಎಂ. ಶೈಲೇಂದ್ರ ಅವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸೋಮವಾರಪೇಟೆ ಘಟಕದ ವತಿಯಿಂದ ಕುಶಾಲನಗರದ ಕಚೇರಿಯಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭ ಸಂಘದ ಜಿಲ್ಲಾ ಅಧ್ಯಕ್ಷ ಹೆಚ್.ಎಸ್. ಚೇತನ್, ತಾಲೂಕು ಅಧ್ಯಕ್ಷ ಹೆಚ್.ಎನ್. ಮಂಜುನಾಥ, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಕೆ. ಕುಮಾರ, ಸ್ಕೌಟ್ ಮತ್ತು ಗೈಡ್ಸ್‍ನ ಕಾರ್ಯದರ್ಶಿ ಎಲ್. ಸುರೇಶ್, ಶಿಕ್ಷಕರಾದ ಹೆಚ್.ಎಂ. ವೆಂಕಟೇಶ, ಎಸ್.ಕೆ. ಸೌಭಾಗ್ಯ ಹಾಜರಿದ್ದರು.ಮಡಿಕೇರಿ, ಆ. 17: ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪೆÇಲೀಸ್ ಗ್ರಾಮಾಂತರ ವೃತ್ತ ನಿರೀಕ್ಷಕ ಸಿ.ಎನ್. ದಿವಾಕರ್ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಇಲಾಖೆಯಲ್ಲಿ ಪೆÇಲೀಸರ ಗಣನೀಯ ಸೇವೆಯನ್ನು ಪರಿಗಣಿಸಿ ಸ್ವಾತಂತ್ರ್ಯ ದಿನಾಚರಣೆಯಂದು ನೀಡುವ ರಾಷ್ಟ್ರಪತಿ ಪದಕಕ್ಕೆ ಭಾಜನರಾದ ಮಡಿಕೇರಿ ಗ್ರಾಮಾಂತರ ಠಾಣೆಯ ವೃತ್ತ ನಿರೀಕ್ಷಕ ಸಿ.ಎನ್. ದಿವಾಕರ್ ಅವರ ಸಾಧನೆಯನ್ನು ಪ್ರಶಂಸಿಸಿ ಕೊಡಗು ದಲಿತ ಸಂಘರ್ಷ ಸಮಿತಿಯಿಂದ ಅವರ ಕಚೇರಿಯಲ್ಲಿ ಸನ್ಮಾನಿಸಲಾಯಿತು. ಜಿಲ್ಲಾ ಸಂಚಾಲಕ ದಿವಾಕರ್ ಹೆಚ್.ಎಲ್., ತಾಲೂಕು ಸಂಚಾಲಕ ದೀಪಕ್ ಎ.ಪಿ. ಗುತ್ತಿಗೆದಾರ ವಿಜಯ್ ಕುಮಾರ್ ಹಾಜರಿದ್ದರು.