ಮಡಿಕೇರಿ, ಆ. 19: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 75ನೇ ಜನ್ಮ ದಿನ ಹಾಗೂ ದಿ.ದೇವರಾಜ ಅರಸು ಅವರ 105ನೇ ಜನ್ಮ ದಿನಾಚರಣೆಯನ್ನು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ತಾ. 20 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಆಚರಿಸಲಾಗುವುದೆಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯ ದರ್ಶಿ ವಿ.ಪಿ. ಸುರೇಶ್ ತಿಳಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯೆ ವೀಣಾಅಚ್ಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಮತ್ತಿತರ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.