ಮಡಿಕೇರಿ, ಆ. 18: ಮಡಿಕೇರಿಯ ಲಯನ್ಸ್ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇತ್ತೀಚೆಗೆ ಲಯನ್ಸ್ ಸಭಾಂಗಣದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಅನಿತಾಸೋಮಣ್ಣ ಹಾಗೂ ತಂಡದವರಿಗೆ ಸಂಸ್ಥೆಯ ಪ್ರಮುಖರಾದ ಪಿ.ಪಿ. ಸೋಮಣ್ಣ ಅವರು ಪ್ರಮಾಣವಚನ ಬೋಧಿಸಿದರು.

ಈ ಸಂದರ್ಭ ಸಂಸ್ಥೆಯ ಇನ್ನಿತರ ಪ್ರಮುಖರು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಕೊರೊನಾ ವಿರುದ್ಧ ಹೋರಾಡುತ್ತಿರುವ ವಾರಿಯರ್ಸ್‍ಗಳನ್ನು ಗೌರವಿಸಲಾಯಿತು.