ಮಡಿಕೇರಿ, ಆ. 19: ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗಳಿಗೆ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಪೆÇ್ರೀತ್ಸಾಹ ಧನ ವಿತರಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನೀಡಲಾದ 1 ಲಕ್ಷ ರೂ.ಗಳನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ವೈದ್ಯಕೀಯ ಸಿಬ್ಬಂದಿಗಳಿಗೆ ಹಸ್ತಾಂತರಿಸಿದರು. ಕೋವಿಡ್ ಆಸ್ಪತ್ರೆ ಯಲ್ಲಿ ಕಾರ್ಯನಿರ್ವಹಿಸುತ್ತಿರುವ 100 ಡಿ. ಗ್ರೂಪ್ ವೈದ್ಯಕೀಯ ಸಿಬ್ಬಂದಿಗಳಿಗೆ ತಲಾ 1 ಸಾವಿರ ರೂ. ಪೆÇ್ರೀತ್ಸಾಹ ಧನ ನೀಡಲಾಯಿತು ಎಂದು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪಿ.ಎಂ. ಸಂದೀಪ್ ತಿಳಿಸಿದರು.

ಈ ಸಂದರ್ಭ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಡಾ. ಕಾರ್ಯಪ್ಪ, ಡಾ. ಅಯ್ಯಪ್ಪ, ಮಿಸ್ಟಿ ಹಿಲ್ಸ್ ಸ್ಥಾಪಕಾಧ್ಯಕ್ಷ ಬಿ.ಜಿ. ಅನಂತಶಯನ, ಕಾರ್ಯ ದರ್ಶಿ ಸತೀಶ್ ಸೋಮಣ್ಣ, ಸಮುದಾಯ ಸೇವಾ ವಿಭಾಗದ ನಿರ್ದೇಶಕಿ ಗಾನಾ ಪ್ರಶಾಂತ್, ಸಾರ್ವಜನಿಕ ಸಂಪರ್ಕ ವಿಭಾಗದ ವಲಯಾಧ್ಯಕ್ಷ ಅನಿಲ್ ಎಚ್.ಟಿ. ರೆಡ್ ಕ್ರಾಸ್ ಜಿಲ್ಲಾ ಸಭಾಧ್ಯಕ್ಷ ಬಿ.ಕೆ. ರವೀಂದ್ರ ರೈ, ಮಡಿಕೇರಿ ನಗರ ಚೇಂಬರ್ ಅಧ್ಯಕ್ಷ ಎಂ. ಧನಂಜಯ್ ಹಾಜರಿದ್ದರು.