ಕೂಡಿಗೆ, ಆ. 19: ಕುಶಾಲನಗರ ಗ್ರಾಮಾಂತರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೌರಿ ಗಣಪತಿ ಹಬ್ಬದ ಸಂದರ್ಭದಲ್ಲಿ ಅನುಸರಿಸುವ ಕ್ರಮದ ಬಗ್ಗೆ ಠಾಣೆಯ ಸಭಾಂಗಣದಲ್ಲಿ ಶಾಂತಿ ಸಭೆಯು ಪೆÇಲೀಸ್ ಠಾಣಾಧಿಕಾರಿ ನಂದೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನೆಡೆಯಿತು.

ಈ ಸಂದರ್ಭದಲ್ಲಿ ಹೋಬಳಿ ವ್ಯಾಪ್ತಿಯ ಎಲ್ಲಾ ದೇವಾಲಯ ಸಮಿತಿಯ ಅಧ್ಯಕ್ಷರು ಮತ್ತು ಗಣಪತಿ ಸಮಿತಿಯ ಮುಖಂಡರು ಭಾಗವಹಿಸಿದ್ದರು. ಸರಕಾರ ನಿಗಧಿ ಪಡಿಸಿರುವ ನಿಯಮದಂತೆ ಅದರ ಸೂಚನೆಯನ್ನು ಕ್ರಮಬದ್ಧವಾಗಿ ಅನುಸರಿಸುವಂತೆ, ಅಲ್ಲದೆ ಯಾವುದೇ ಜನಜಂಗುಳಿ ಸೇರಿದಂತೆ ಕಾನೂನಿನ ನಿಯಮಗಳನ್ನು ಪಾಲಿಸುವಂತೆ ಸೂಚಿಸಲಾಯಿತು.