ಮಡಿಕೇರಿ, ಆ. 19: ವೀರಾಜಪೇಟೆ ತಾಲೂಕು ಪೊನ್ನಂಪೇಟೆಯ ವ್ಯಾಪ್ತಿಯಲ್ಲಿ ಆಗಸ್ಟ್ 4 ರಂದು ಗುರುತಿಸಲಾದ ಅಂಗನವಾಡಿ ಕಾರ್ಯಕರ್ತೆ / ಸಹಾಯಕಿಯರ ಸಂಭವನೀಯ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾ ಕಚೇರಿ ಪೊನ್ನಂಪೇಟೆ ವೀರಾಜಪೇಟೆ ತಾಲೂಕು ಇಲ್ಲಿ ಪ್ರಕಟಿಸಲಾಗಿದೆ. ಈ ಬಗ್ಗೆ ಸಂಬಂಧಿಸಿದವರಿಂದ ಆಕ್ಷೇಪಣೆಗಳಿದ್ದಲ್ಲಿ ತಾ. 26 ರ ಸಂಜೆ 5.30 ಗಂಟೆಯೊಳಗೆ ಸೂಕ್ತ ದಾಖಲಾತಿಯೊಂದಿಗೆ ಮನವಿಯನ್ನು ಖುದ್ದಾಗಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಪೊನ್ನಂಪೇಟೆ ಇಲ್ಲಿ ಸಲ್ಲಿಸಬೇಕು ಎಂದು ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.