ಮಡಿಕೇರಿ, ಆ. 19: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಐಬಿಪಿಎಸ್ ರಾಷ್ಟ್ರೀಕೃತ ಬ್ಯಾಂಕ್ನಿಂದ ಮುಂದಿನ ದಿನಗಳಲ್ಲಿ ಒಂಬತ್ತು ಸಾವಿರ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಆನ್ಲೈನ್ ಮೂಲಕ ನೀಡಲು ಆಯೋಜಿಸಿದೆ. ಆಸಕ್ತರು ತಾ. 25 ರೊಳಗೆ (ರಜಾ ದಿನಗಳನ್ನು ಹೊರತುಪಡಿಸಿ) ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಕುಲ ಸಚಿವರಾದ ಪ್ರೊ.ಲಿಂಗರಾಜ ಗಾಂಧಿ ಅವರು ತಿಳಿಸಿದ್ದಾರೆ.