ಮಡಿಕೇರಿ, ಆ. 18: ಪ್ರಸಕ್ತ ವರ್ಷ ಶ್ರೀ ತಲಕಾವೇರಿ ಸನ್ನಿಧಿ ಹಾಗೂ ಭಗಂಡೇಶ್ವರ ಕ್ಷೇತ್ರ ಸೇರಿದಂತೆ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದ ದುರಂತಗಳು ಘಟಿಸಿರುವ ಹಿನ್ನೆಲೆ ಯಲ್ಲಿ ಕೊಡವ ಜನಾಂಗದ ಪರವಾಗಿ ಪುಣ್ಯಕ್ಷೇತ್ರದಲ್ಲಿ ವಿಶೇಷ ಪೂಜೆ ಯೊಂದಿಗೆ, ಪ್ರಾರ್ಥನೆ ನೆರವೇರಿ¸ Àಲಾಯಿತು. ಕೊಡವ ಸಮಾಜಗಳ ಒಕ್ಕೂಟದ ಮೂಲಕ ಜಿಲ್ಲೆಯ ಇತರ ಕೊಡವ ಸಮಾಜಗಳ ಪದಾಧಿಕಾರಿಗಳು ನಾರಾಯಣಾಚಾರ್ ಅವರ ಪುತ್ರಿ ಯರನ್ನು ಭೇಟಿ ಮಾಡಿದ ಜನಾಂಗದ ಪ್ರಮುಖರು ಅವರಿಗೆ ಸಾಂತ್ವನ ಹೇಳಿದರು. ನಂತರ ದುರಂತ ಸಂಭವಿಸಿದ ಸ್ಥಳಕ್ಕೂ ಭೇಟಿ ನೀಡಿ ಪರಿಶೀಲಿಸಲಾಯಿತು.ರೈಲು - ಹೆದ್ದಾರಿ ಬೇಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ಕೊಡಗಿಗೆ ಪ್ರವಾಸೋದ್ಯಮ, ರೈಲುಮಾರ್ಗ, ಚತುಷ್ಪತ ಇಲ್ಲವೆ ಆರು ಲೇನ್ ರಸ್ತೆಯ ಅಗತ್ಯ ಇಲ್ಲ. ಬದಲಾಗಿ ಕೊಡಗಿನ ಮುಖ್ಯ ಸಮಸ್ಯೆಗಳಾದ ರೈತರು ಬೆಳೆಯುವ ಕಾಫಿ, ಭತ್ತ ಕರಿ ಮೆಣಸು, ಅಡಿಕೆ, ಏಲಕ್ಕಿ ಮತ್ತಿತರ ಬೆಳೆಗಳಿಗೆ ಬೆಂಬಲ ಬೆಲೆ, ರಸಗೊಬ್ಬರಕ್ಕೆ ಸಹಾಯಧನ ನೀಡಿ, ಪೆಟ್ರೋಲ್ ಮತ್ತು ಡಿಸೇಲ್ ಬೆಲೆ
(ಮೊದಲ ಪುಟದಿಂದ) ಕಡಿಮೆ ಮಾಡಿ ಸರ್ವಋತುಗಳಿಗೆ ಹೊಂದುವಂತಹ ಗುಣ ಮಟ್ಟದ ರಸ್ತೆ, ಶಾಲಾ ಕಟ್ಟಡ, ಅಂಗನವಾಡಿ ಕಟ್ಟಡಗಳ ದುರಸ್ತಿ, ಮಕ್ಕಳಿಗೆ ಗುಣಮಟ್ಟ ಶಿಕ್ಷಣ, ರೋಗಿಗಳಿಗೆ ಉತ್ತಮ ಚಿಕಿತ್ಸೆ, ವೃದ್ಧರಿಗೆ ಪ್ರವಾಸಿ ವೇತನ, ವಿಧವಾ ವೇತನ, ಬಡವರಿಗೆ ವಾಸದ ಮನೆ, ದಿನದ 24 ಗಂಟೆ ತಡೆ ರಹಿತ ವಿದ್ಯುಚ್ಛಕ್ತಿಯನ್ನು ಸರ್ಕಾರದಿಂದ ನೀಡುವಂತಾಗಬೇಕು ಎಂದು ಒತ್ತಾಯಿಸಿದರು.
ವನ್ಯ ಜೀವಿಗಳ ಹಾವಳಿ ತಡೆಯಲು ರೈಲು ಕಂಬಿಯ ಬ್ಯಾರಿಕೇಡ್ ಹಾಗೂ ಸೋಲಾರ್ ಬೇಲಿಯ ನಿರ್ಮಾಣ ಮಾಡಿ, ಆನೆ, ಹುಲಿ, ಕಾಡು ಕೋಣ ಮತ್ತು ಕಾಡುಹಂದಿಗಳಿಂದ ಬೆಳೆಗಾರರ ಹಾಗೂ ಜೀವ ಹಾನಿ ಉಳಿಸುವಂತೆ ಆಗ್ರಹಿಸಿದರು.
ಕೊಡವ ಕುಲದೇವತೆ ಮಾತೆ ಕಾವೇರಿಯ ಸಂಕ್ರಮಣದ ದಿನ ಕಾವೇರಿ ಮಾತೆಯ ಕಣಿ ಪೂಜೆಯಿಂದ ಹಿಡಿದು ಹುಟ್ಟಿದ ಮಕ್ಕಳ ಮೊದಲ ತಲೆ ಮುಡಿ ಮದುವೆಯಾದ ಮೊದಲ ಸಲ ದಂಪತಿಗಳ ಕಾವೇರಿ ತೀರ್ಥ ಸ್ಥಾನ ಹಾಗೆ ಸತ್ತನಂತರ ಪಿಂಡ ಪ್ರಧಾನ ಪುರಸ್ಕಾರವೇ ಸಾಕ್ಷಿ.
ಶ್ರೀ ಕ್ಷೇತ್ರ ಪುಣ್ಯ ತೀರ್ಥಕ್ಷೇತ್ರವಾಗಿ ಉಳಿಯ ಬೇಕೆ ಹೊರತು ಪ್ರವಾಸಿ ತಾಣವಾಗಬಾರದು. ಪ್ರವಾಸಿಗಳ ಮೋಜು ಮಸ್ತಿಗೆ ಅವಕಾಶ ನೀಡದೆ, ಭಕ್ತಾದಿಗಳ ದಿವ್ಯ ತೀರ್ಥ ಕ್ಷೇತ್ರವಾಗಬೇಕು. ಅಲ್ಲದೆ ಜಾತ್ರೆ ಸಮಯದಲ್ಲಿ ಸ್ಥಳೀಯರಿಗೆ (ಕೊಡಗಿನ ಮೂಲ ನಿವಾಸಿಗಳಿಗೆ) ಹೆಚ್ಚಿನ ಆದ್ಯತೆ ನೀಡುವಂತಾಗಬೇಕು ಎಂದರು. ಶ್ರೀ ಕಾವೇರಿ ಕ್ಷೇತ್ರ ರಾಜಕೀಯ ಹಿತವಾಗಿ ಜಾತಿ, ಮತ, ಧರ್ಮ, ಬೇದವನ್ನು ಮೆಟ್ಟಿನಿಂತಿರಬೇಕು, ಕ್ಷೇತ್ರದ ಅಭಿವೃದ್ಧಿಗೆ ಪ್ರತಿಯೊಬ್ಬರು ಸಹಕರಿಸಬೇಕು. ಆಕ್ಷೇಪ ಅಪಸ್ವರ ಒಳಿತಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕೊರೊನಾ ವೈರಸ್ ಹರಡದಂತೆ ಹಗಲಿರುಳು ದುಡಿಯುತ್ತಿರುವ ಕೊರೊನಾ ವಾರಿಯರ್ಸ್ಗಳಿಗೆ ಇದೇ ಸಂದರ್ಭ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭ ಒಕ್ಕೂಟದ ಕಾರ್ಯದರ್ಶಿ ವಾಟೇರಿರ ಶಂಕರಿ, ವೀರಾಜಪೇಟೆ ಕೊಡವ ಸಮಾಜದ ಅಧ್ಯಕ್ಷ ವಾಂಚೀರ ವಿಠಲ್ ನಾಣಯ್ಯ, ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಅಪ್ಪಚಟ್ಟೋಳಂಡ ಮನುಮುತ್ತಪ್ಪ, ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಚೊಟ್ಟೆಕ್ಮಾಡ ರಾಜೀವ್ ಬೋಪಯ್ಯ, ಮಕ್ಕಂದೂರು ಕೊಡವ ಸಮಾಜದ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಚೇರಂಬಾಣೆ ಕೊಡವ ಸಮಾಜದ ಅಧ್ಯಕ್ಷ ಬಾಚಿರಣಿಯಂಡ ದಿನೇಶ್ ಗಣಪತಿ, ಚೆಯ್ಯಂಡಾಣೆ ಕೊಡವ ಸಮಾಜದ ಅಧ್ಯಕ್ಷ ಮುಂಡ್ಯೂಳಂಡ ಬಿದ್ದಪ್ಪ, ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷ ನೆರವಂಡ ಅನೂಪ್ ಉತ್ತಯ್ಯ, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಕೊಂಗಂಡ ಜಯ ದೇವಯ್ಯ, ಮಡಿಕೇರಿ ಕೊಡವ ಸಮಾಜದ ಪೊಮ್ಮಕ್ಕಡ ಸಂಘದ ಅಧ್ಯಕ್ಷರಾದ ಕನ್ನಂಡ ಕವಿತ ಬೊಳ್ಳಪ್ಪ ಪ್ರಮುಖರಾದ ಬೊಳ್ಳಜಿರ ಬಿ. ಅಯ್ಯಪ್ಪ, ಚೆಪ್ಪುಡಿರ ರಾಕೇಶ್ ದೇವಯ್ಯ, ಕೊಟೇರ ರಘು ಸೇರಿದಂತೆ ಎಲ್ಲಾ ಕೊಡವ ಸಮಾಜದ ಆಡಳಿತ ಮಂಡಳಿಯ ಸದಸ್ಯರು ಪಾಲ್ಗೊಂಡಿದ್ದರು.