ಸೋಮವಾರಪೇಟೆ, ಆ. 18: ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಗೆ ದ್ವಿತೀಯ ಸ್ಥಾನಗಳಿಸಿದ ಇಲ್ಲಿನ ಮಹದೇಶ್ವರ ಬಡಾವಣೆಯ ಗಾನಾಳನ್ನು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ಸ್ಮಾನಿಸಿದರು.

ಶಾಸಕರ ಕಚೇರಿಯಲ್ಲಿ ಗಾನಾಳನ್ನು ಸನ್ಮಾನಿಸಿ ಮಾತನಾಡಿದ ಶಾಸಕರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸಾಧನೆ ಮಾಡುತ್ತಿರುವದು ಹೆಮ್ಮೆಯ ವಿಚಾರ. ಅದರಲ್ಲೂ ವಿದ್ಯಾರ್ಥಿನಿಯರೇ ಪ್ರತಿಬಾರಿಯೂ ಮೇಲುಗೈ ಸಾಧಿಸುತ್ತಿದ್ದಾರೆ. ಉತ್ತಮ ವಿದ್ಯಾಭ್ಯಾಸದಿಂದ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದರು. ಈ ಸಂದರ್ಭ ತಾ.ಪಂ. ಉಪಾಧ್ಯಕ್ಷ ಅಭಿಮನ್ಯುಕುಮಾರ್, ಬಿಜೆಪಿ ತಾಲೂಕು ಅಧ್ಯಕ್ಷ ಮನುಕುಮಾರ್ ರೈ, ಪ.ಪಂ. ನಾಮನಿರ್ದೇಶಿತ ಸದಸ್ಯ ಶರತ್‍ಚಂದ್ರ, ಗಾನಾಳ ಪೋಷಕರಾದ ಸುಜಿತ್, ಸೀಮಾ ಅವರುಗಳು ಉಪಸ್ಥಿತರಿದ್ದರು.