ಮಡಿಕೇರಿ, ಆ. 19: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಸಹಯೋಗದಲ್ಲಿ ಕೊಡಗು ಜಿಲ್ಲೆಯ ತುಳು ಭಾಷಿಕರಿಗೆ ‘ತುಳು ಕವಿತೆ’ ‘ತುಳು ಗಾದೆ’ ಮತ್ತು ‘ತುಳು ಎದುರು ಕತೆ’ ಸ್ಪರ್ಧೆಯನ್ನು ಆಯೋಜಿಸಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಪಿ.ಎಂ. ರವಿ ತಿಳಿಸಿದ್ದಾರೆ.
ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್ ಸಾರ್ ನೇತೃತ್ವದಲ್ಲಿ ಅಕಾಡೆಮಿಯು ನಿರಂತರ ಕಾರ್ಯಕ್ರಮ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿಯೂ ಕೊಡಗು ಜಿಲ್ಲೆಯಲ್ಲಿ ಅನೇಕ ಕಾರ್ಯಕ್ರಮ ನಡೆಸಲಾಗು ವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಳು ಗಾದೆ, ಕವಿತೆ, ಎದುರು ಕತೆ ಸ್ಪರ್ಧೆಗೆ ಪ್ರಥಮ ಮತ್ತು ದ್ವಿತೀಯ ಬಹುಮಾನ ನಗದು, ನೆನಪಿನ ಕಾಣಿಕೆ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು ಎಂದರು. ತಾ. 31 ಕೊನೆಯ ದಿನವಾಗಿದ್ದು, ಸ್ಪರ್ಧಿಗಳು ವಾಟ್ಸಪ್ ನಂ. 9972073295ಕ್ಕೆ ತಮ್ಮ ಪೂರ್ಣ ವಿಳಾಸ ಮತ್ತು ದೂರವಾಣಿ ಸಂಖ್ಯೆ ಯೊಂದಿಗೆ ಬರಹಗಳನ್ನು ಕಳುಹಿಸುವಂತೆ ತಿಳಿಸಿದ್ದಾರೆ.