ಸಿದ್ದಾಪುರ, ಆ. 19: ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 4 ಮಂದಿ ಪೋಲೀಸರಿಗೆ ಕೊರೊನಾ ವೈರಸ್ ಪತ್ತೆಯಾಗಿದೆ. ಸಹಾಯಕ ಠಾಣಾಧಿಕಾರಿ ಸೇರಿದಂತೆ 4 ಮಂದಿಗೆ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆ ಹಾಗೂ ವಸತಿ ಗೃಹಗಳ ಸುತ್ತಲೂ ಸ್ಯಾನಿಟೈಸ್ ಮಾಡಲಾಯಿತು. ಸಿದ್ದಾಪುರದ ಮೈಸೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನಾ ವೈರಸ್ ಪತ್ತೆಯಾಗಿದೆ.