ಮಡಿಕೇರಿ, ಆ. 20: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಸದ್ಭಾವನಾ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಪ್ರತಿಜ್ಞಾ ವಿಧಿಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸ್ನೇಹ ಅವರು ಬೋಧಿಸಿದರು, ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇಧಭಾವವಿಲ್ಲದೇ ಭಾರತದ ಎಲ್ಲಾ ಜನತೆಯ ಭಾವೈಕ್ಯ ಮತ್ತು ಸೌಹಾರ್ದ ಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆ ಎಂದು ಪ್ರತಿಜ್ಞೆ ವಿಧಿ ಸ್ವೀಕರಿಸ ಲಾಯಿತು. ವೈಯಕ್ತಿಕವಾಗಿಯಾಗಲೀ ಅಥವಾ ಸಾಮೂಹಿಕವಾಗಿಯಾಗಲೀ ಎಲ್ಲಾ ಬೇಧಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇವೆಂದು ಪ್ರತಿಜ್ಞೆ ಮಾಡುತ್ತೇವೆ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭ ನಾನಾ ಇಲಾಖೆ ಅಧಿಕಾರಿಗಳು ಇತರರು ಇದ್ದರು.