ವೀರಾಜಪೇಟೆ, ಆ. 20: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ವೀರಾಜಪೇಟೆ ಹಾಗೂ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿಯನ್ನು ತಹಶೀಲ್ದಾರ್ ಮೂಲಕ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಉಪ ತಹಶೀಲ್ದಾರ್ ಪೊನ್ನು ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಕಳುಹಿಸಿ ಕೊಡಲಾಗುವುದು ಎಂದು ಹೇಳಿದರು.
ರೈತ ವಿರೋಧಿ ಭೂಸುಧಾರಣಾ ತಿದ್ದುಪಡಿ, ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ವಿರೋದಿ ಕಾರ್ಮಿಕ ಕಾಯಿದೆ ತಿದ್ದುಪಡಿಗಳನ್ನು ತಕ್ಷಣ ವಾಪಸ್ಸು ತೆಗೆದುಕೊಳ್ಳಬೇಕು, ರಾಜ್ಯದಲ್ಲಿ ಅತಿವೃಷ್ಟಿಯಿಂದ ಆಗಿರುವ ತೀವ್ರ ಹಾನಿಗೆ ಪರಿಹಾರ ಒದಗಿಸಲು ವಿಫಲವಾಗಿರುವ ಸರಕಾರದ ನಿಲುವನ್ನು ಪ್ರತಿಭಟಿಸಿ ಹಾಗೂ ಕೊರೊನಾ ನಿಯಂತ್ರಣ ಕಾರ್ಯಕ್ರಮದಲ್ಲಿ ನಡೆದ ವ್ಯಾಪಕ ಭ್ರಷ್ಟಾಚಾರ ವಿಷಯದಲ್ಲಿ ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಒತ್ತಾಯಿಸಲಾಯಿತು.
ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ, ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ್ ಮಾಚಯ್ಯ, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಬಲ್ಯಮೀದೇರಿರ ನವೀನ್, ಕರ್ನಾಟಕ ಕಿಸಾನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ, ಎಸ್.ಸಿ. ಘಟಕದ ಜಿಲಾಧ್ಯಕ್ಷ ವಿ.ಕೆ. ಸತೀಶ್, ನಗರ ಅದ್ಯಕ್ಷ ಜಿ.ಜಿ ಮೋಹನ್, ತೀತಿರ ಧರ್ಮಜ, ಸರ ಚಂಗಪ್ಪ, ವೀರಾಜಪೇಟೆ ಬ್ಲಾಕ್ ಮಹಿಳಾ ಘಟಕದ ಅಧ್ಯಕ್ಷೆ ತೋರೆರ ಪೊನ್ನಕ್ಕಿ, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ನಗರ ಘಟಕ ಅದ್ಯಕ್ಷ ಪಟ್ಟಡÀ ರಕ್ಷಿತ್ ಮತ್ತಿತರರು ಪಾಲ್ಗೊಂಡಿದ್ದರು.