ಸೋಮವಾರಪೇಟೆ, ಆ. 20: ಪಟ್ಟಣದ ನಿವಾಸಿ ಡಾ. ದೇವಿಕ ಅವರು ಸ್ನಾತಕೋತ್ತರ ವೈದ್ಯಕೀಯ ಪದವಿಯಲ್ಲಿ ಪ್ರಥಮ ರ್ಯಾಂಕ್ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.

ಡಾ. ದೇವಿಕ, ಬಳ್ಳಾರಿಯ ವಿಜಯನಗರ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಮಕ್ಕಳ ವಿಭಾಗದಲ್ಲಿ ಕಳೆದ ಮೂರು ವರ್ಷಗಳ ಸ್ನಾತಕೋತ್ತರ ಪದವಿಯನ್ನು ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಡಾ. ರಿಯಾಜ್ ಅವರ ಮಾರ್ಗದರ್ಶನದಲ್ಲಿ ಪೂರೈಸಿದ್ದು, ಅಂತಿಮ ವರ್ಷದ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಪಡೆದಿದ್ದಾರೆ.

ಪ್ರಾಥಮಿಕ ಶಿಕ್ಷಣವನ್ನು ಸ್ಥಳೀಯ ಒಎಲ್‍ವಿ ಶಾಲೆಯಲ್ಲಿ ಮುಗಿಸಿದ ಇವರು, ನಂತರ ಮಡಿಕೇರಿಯ ಜವಹರ್ ನವೋದಯ ವಿದ್ಯಾಲಯದಲ್ಲಿ ಪ್ರಥಮ ಸ್ಥಾನದೊಂದಿಗೆ ಪ್ರೌಢ ಮತ್ತು ಪಿಯುಸಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸರ್ಕಾರಿ ಕೋಟಾದಲ್ಲಿ ಎಂಬಿಬಿಎಸ್ ಪದವಿಯನ್ನು ಮತ್ತು ಸ್ನಾತಕೋತ್ತರ ಪದವಿಯನ್ನು ಪ್ರಥಮ ಸ್ಥಾನದೊಂದಿಗೆ ಪಡೆದುಕೊಂಡಿದ್ದಾರೆ.

ಇವರು ಸೋಮವಾರಪೇಟೆಯ ಜ್ಞಾನವಿಕಾಸ ಶಾಲೆಯ ಮುಖ್ಯೋಪಾಧ್ಯಾಯಿನಿ ಲಕ್ಷ್ಮಿ ಮತ್ತು ಸ್ಥಳೀಯ ಪಿಎಸಿಎಸ್ ಬ್ಯಾಂಕ್‍ನ ಉದ್ಯೋಗಿ ಚನ್ನಕೇಶವ ಅವರ ಪುತ್ರಿ.