ಮಡಿಕೇರಿ, ಆ. 20: ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಸಂಕಷ್ಟಕ್ಕೊಳಗಾಗಿರುವ ಪ್ರವಾಹ ಪೀಡಿತ ಪ್ರದೇಶ ಹಾಗೂ ಸಂತ್ರಸ್ತರ ಮನೆಗಳಿಗೆ ಕಾಂಗ್ರೆಸ್‍ನ ಪ್ರಮುಖರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ನೇತೃತ್ವದಲ್ಲಿ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು.
ನಂತರ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ತಹಶೀಲ್ದಾರರಿಗೆ ಕರೆ ಮಾಡಿ ಜನರ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ ಸ್ಪಂದಿಸುವಂತೆ ಹೇಳಿದರು. ಅಲ್ಲದೆ ಶಾಶ್ವತ ತಡೆಗೋಡೆ ನಿರ್ಮಿಸಿದಲ್ಲಿ ಇಡೀ ಗ್ರಾಮವನ್ನೇ ಸುರಕ್ಷಿತವಾಗಿಡಲು ಸಾಧ್ಯ ಎಂದು ಸಲಹೆ ನೀಡಿದರು.
ನಿಯೋಗದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಕದನೂರು ಮಾಜಿ ಪಂಚಾಯಿತಿ ಸದಸ್ಯ ಹನಿಫ್, ಎನ್‍ಎಸ್‍ಯುಐ ಜಿಲ್ಲಾಧ್ಯಕ್ಷ ತ್ರಿನೇಶ್, ಐಎನ್‍ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಈ ಸುರೇಶ್ ಹಾಗೂ ಕಾಂಗ್ರೆಸ್ ಪದಾಧಿಕಾರಿಗಳು ಹಾಜರಿದ್ದರು.