ನಾಪೋಕ್ಲು, ಆ. 20: ನಾಪೋಕ್ಲು ಗ್ರಾ.ಪಂ. ವ್ಯಾಪ್ತಿಯ ಕೊಳಕೇರಿ ಗ್ರಾಮದ ಹೊಳೆ ಬದಿಯಲ್ಲಿ ತ್ಯಾಜ್ಯ ಎಸೆಯಲಾಗುತ್ತಿದ್ದು, ಈ ತ್ಯಾಜ್ಯ ಮಳೆಗೆ ಕೊಳೆತು ದುರ್ವಾಸನೆ ಬೀರುತ್ತಿದೆ. ತ್ಯಾಜ್ಯವನ್ನು ಸುರಿಯುವವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ನಾಪೋಕ್ಲು-ಕಕ್ಕಬ್ಬೆ ಮುಖ್ಯರಸ್ತೆಯ ಕೋಟೇರಿ ಸೇತುವೆ ಬಳಿ ಮೂರಿಕಡು ಹೊಳೆ ಹರಿಯುತ್ತಿದ್ದು ಅಲ್ಲಿ ತ್ಯಾಜ್ಯವನ್ನು ಎಸೆಯುತ್ತಿರುವುದರಿಂದ ನೀರು ಕಲುಷಿತವಾಗುತ್ತಿದೆ. ಸಂಬಂಧಿಸಿದವರು ಈ ಬಗ್ಗೆ ಕ್ರಮಕೈಗೊಂಡು ನೀರು ಕಲುಷಿತವಾಗುವುದನ್ನು ತಪ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

-ದುಗ್ಗಳ